6 ವರ್ಷಗಳ ನಂತರ ಕನ್ನಡಕ್ಕೆ ಬಂದ್ರು ದಕ್ಷಿಣ ಭಾರತದ ಈ ನಟಿ

ಶಿವಲಿಂಗ ಚಿತ್ರದ ನಂತರ ನಟಿ ವೇದಿಕಾ ಅವರು ಮತ್ತೆ ಸ್ಯಾಂಡಲ್ ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಅವರು ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಹೋಮ್ ಮಿನಿಸ್ಟರ್ ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ವೇದಿಕಾ ನಟಿಸುತ್ತಿದ್ದಾರೆ. ಸುಜಯ್ ಕೆ ಶ್ರೀಹರಿ ಅವರು ಹೋಮ್ ಮಿನಿಸ್ಟರ್ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಜಿಬ್ರಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ. ಕುಂಟುನಿ ಎಸ್ ಕುಮಾರ ಛಾಯಾಗ್ರಹಣವನ್ನು ನೀಡಿದ್ದು, ಆಂಟೋನಿ ಅವರ ಸಂಕಲನ ಈ ಚಿತ್ರಕ್ಕಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುನಿರೀಕ್ಷಿತ ಹೋಂ ಮಿನಿಸ್ಟರ್ ಚಿತ್ರದಿಂದ ಉಪೇಂದ್ರ ಅವರಿಗೆ, ಈ ಚಿತ್ರದ ಮೂಲಕ ಅಭಿಮಾನಿಗಳ ಚಕ್ರವರ್ತಿ ಎಂದು ಬಿರುದು ನೀಡಲಾಗಿದೆ. ಅಭಿಮಾನಿಗಳ ಚಕ್ರವರ್ತಿ ಎನಿಸಿಕೊಳ್ಳುವುದು ಸಾಮಾನ್ಯವಾದ ವಿಷಯವೇನಲ್ಲ.

ಹೆಸರಿಗೆ ತಕ್ಕಂತೆ ಯೂನಿಕ್ ಆಗಿ ತಮ್ಮ ಚಿತ್ರಗಳ ಮೂಲಕ ಒಳ್ಳೆಯ ಸಂದೇಶವನ್ನು ಪ್ರಜೆಗಳಿಗೆ ನೀಡುವ ಉಪೇಂದ್ರ ಅವರು, ಪ್ರಜೆಗಳಿಂದ, ಪ್ರಜೆಗಳಿಗೋಸ್ಕರ, ಪ್ರಜೆಗಳಿಗಾಗಿ ಎನ್ನುವ ತತ್ವವನ್ನು ಅನುಸರಿಸುವವರಾಗಿದ್ದಾರೆ. ಇನ್ನು ಹೋಂ ಮಿನಿಸ್ಟರ್ ಚಿತ್ರದಲ್ಲಿ ನಟಿ ವೆದಿಕಾ, ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕಾ ಅವಿನಾಶ್, ತಿಲಕರು, ಲಾಸ್ಯ ಸುಧಾಬೆಳವಾಡಿ, ಶ್ರೀನಿವಾಸಮೂರ್ತಿ, ವಿಜಯ್ ಚಂಡೂರ್, ಬೇಬಿ ಆದ್ಯ ಮುಂತಾದವರು ಚಿತ್ರದ ತಾರಾಗಣದಲ್ಲಿದ್ದಾರೆ. ಇನ್ನು ಈ ಚಿತ್ರವನ್ನು ಪೂರ್ಣಚಂದ್ರ ನಾಯ್ಡು ಅವರು ನಿರ್ಮಿಸುತ್ತಿದ್ದು, ಶ್ರೀಕಾಂತ್ ವೀರಮಾಚನೆನಿ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಈಗಾಗಲೇ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದಿದ್ದು, ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲು ಚಿತ್ರತಂಡ ಇತ್ತೀಚಿಗೆ ಪತ್ರಿಕಾಗೋಷ್ಠಿಯನ್ನು ಆಯೋಜಿಸಿತ್ತು.

ಈ ಕಾರ್ಯಕ್ರಮದಲ್ಲಿ ಉಪೇಂದ್ರ ಅವರು ಬಿಡುಗಡೆಯ ದಿನಾಂಕ ಉಳ್ಳ ಪೋಸ್ಟರನ್ನು ಅನಾವರಣಗೊಳಿಸಿದರು. ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹೋಂ ಮಿನಿಸ್ಟರ್ ಚಿತ್ರವನ್ನು ಶ್ರೇಯ ಚಿತ್ರದ ಮೂಲಕ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿರುವುದಾಗಿ ಬೆಂಗಳೂರು ಕುಮಾರ್ ತಿಳಿಸಿದರು. ವಿಶೇಷವೆಂದರೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವವರು ತೆಲುಗಿನ ನಿರ್ಮಾಪಕರು. ಇನ್ನು ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರದ ಬಗ್ಗೆ ಮಾತನಾಡಿದ ನಟಿ ವೇದಿಕಾ ಅವರು ನನಗೆ ಬಹಳ ದಿನಗಳ ನಂತರ ನಿಮ್ಮ ಮುಂದೆ ಮಾತನಾಡಲು ಖುಷಿಯಾಗುತ್ತಿದೆ. ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆಗೆ ನಟಿಸುತ್ತಿರುವುದು ಅತಿ ಹೆಚ್ಚು ಖುಷಿ ತಂದಿದೆ.

ಈ ಚಿತ್ರದಲ್ಲಿ ನಾನು ಜರ್ನಲಿಸ್ಟ್ ಪಾತ್ರ ನಿರ್ವಹಿಸಿದ್ದೇನೆ. ಇಡೀ ಚಿತ್ರತಂಡ ಸಾಕಷ್ಟು ಪರಿಶ್ರಮದಿಂದ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಪರಿಶ್ರಮಕ್ಕೆ ತಕ್ಕಂತೆ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಈ ಚಿತ್ರದಲ್ಲಿ ನಾನು ನಿರ್ವಹಿಸುತ್ತಿರುವ ಪಾತ್ರ ಇದುವರೆಗೂ ನಾನು ಮಾಡಿರದ ಪಾತ್ರ. ಇಲ್ಲಿನ ನಿರ್ಮಾಪಕರು ಬೇರೆ ಕಡೆ ಹೋಗಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗುವಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಸಾಕಷ್ಟು ಜನ ತೆಲುಗಿನ ನಿರ್ಮಾಪಕರು ಒಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು. ಎಲ್ಲರೂ ಹೋಂ ಮಿನಿಸ್ಟರ್ ಚಿತ್ರವನ್ನು ಯಶಸ್ವಿ ಮಾಡೋಣ ಎಂದು ವೇದಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇನ್ನೂ ಹೋಂ ಮಿನಿಸ್ಟರ್ ಚಿತ್ರವು ಎಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

%d bloggers like this: