ಏಮ್ಸ್ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ವಿಜಯಪುರದ ಕನ್ನಡತಿ

ನಮ್ಮ ರಾಜ್ಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು ದೇಶದಲ್ಲಿ ನಡೆಯುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯಕ್ಕೆ ಕೀರ್ತಿ ತಂದಿರುವ ಉದಾಹರಣೆಗಳು ಬಹಳ. ಅದರಲ್ಲೂ ಸದ್ಯದ ಚಿತ್ರಣದಲ್ಲಿ ಯುವತಿಯರು ಸಮಾಜದ ಎಲ್ಲಾ ಕಟ್ಟುಪಾಡುಗಳನ್ನು ದಾಟಿ ಸಾಧನೆಯ ಶಿಖರವನ್ನು ಏರುತ್ತಿರುವುದು ದೇಶದ ಹೆಮ್ಮೆಯ ಸಂಗತಿಯೇ ಸರಿ. ಇದೀಗ ನಮ್ಮ ರಾಜ್ಯದ ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರು ನಮ್ಮ ರಾಜ್ಯಕ್ಕೆ ಹೆಮ್ಮೆಯನ್ನು ತಂದಿದ್ದಾರೆ. ಹೌದು ದೆಹಲಿಯ ಏಮ್ಸ್ ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯ ಫಲಿತಾಂಶ ಬಂದಿದ್ದು ಅದರಲ್ಲಿ ವಿಜಯಪುರ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯ ಇಡೀ ದೇಶಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಹೌದು ವಿಜಯಪುರದ ದಿವ್ಯ ಹಿರೋಳ್ಳಿ ಅವರು ಡಿಎಂ ಜನರಲ್ ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೇ ನವೆಂಬರ್ 20ರಂದು ಏಮ್ಸ್ ಪರೀಕ್ಷೆಯನ್ನು ಹಮ್ಮಿಕೊಂಡಿತ್ತು. ದಿವ್ಯ ಅವರು 67.08 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ವಿಜಯಪುರದ ವೈದ್ಯಕೀಯ ಮಹಾವಿದ್ಯಾಲಯ ಬಿಎಲ್ ಡಿಇ ನಲ್ಲಿ ವೈದ್ಯಕೀಯ ಪದವಿಯನ್ನು ಪಡೆದುಕೊಂಡು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ ಅನ್ನು ವ್ಯಾಸಂಗವನ್ನು ಮಾಡಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಕ್ರಿಟಿಕಲ್ ಕೇರ್ ವಿಭಾಗದಲ್ಲಿ ಅಧ್ಯಯನವನ್ನು ಮಾಡಿದ್ದಾರೆ. ತುಂಬಾ ಕಠಿಣವಾದ ಈ ವೈದ್ಯಕೀಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಿವ್ಯ ಅವರು ಮಾಡಿರುವಂತಹ ಈ ಸಾಧನೆ ನಿಜಕ್ಕೂ ಶ್ಲಾಘನೀಯ ಮತ್ತು ಅನುಕರಣೀಯ ಎನ್ನಬಹುದು. ಇಡೀ ರಾಜ್ಯಕ್ಕೆ ಹೆಮ್ಮೆಯನ್ನು ತಂದ ದಿವ್ಯ ಅವರಿಗೆ ಶುಭಾಶಯಗಳು.

%d bloggers like this: