ಅಜಯ್ ಅವರ ಹೊಸ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಗ್ರೀನ್ ಸಿಗ್ನಲ್

ಸ್ಯಾಂಡಲ್ವುಡ್ ನ ಕೃಷ್ಣ ಖ್ಯಾತಿಯ ಅಜಯ್ ರಾವ್ ಅವರು ಶೋಕಿವಾಲ ಚಿತ್ರದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಸಿನೆಮಾದ ಆರಂಭದಿಂದ ಇಂದಿನವರೆಗೂ ವಿಭಿನ್ನ ರೀತಿಯಲ್ಲಿ ಸದ್ದು ಮಾಡುತ್ತಿರುವ ಶೋಕಿವಾಲ ಚಿತ್ರದಲ್ಲಿ ಅಜಯ್ ರಾವ್ ಗೆ ನಾಯಕಿಯಾಗಿ ಸಂಜನಾ ಆನಂದ್ ಅಭಿನಯಿಸುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಲಕ್ಕಿ, ಸಂತು ಸ್ಟ್ರೇಟ್ ಫಾರ್ವರ್ಡ್, ಕೆಜಿಎಫ್ ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಜಾಕಿ ಅವರು ಮೊದಲ ಬಾರಿಗೆ ಈ ಚಿತ್ರಕ್ಕೆ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಶೋಕಿವಾಲ ಚಿತ್ರವು ಹಳ್ಳಿ ಸೊಗಡಿನ ಕಥೆಯಾಗಿದ್ದು, ಚನ್ನಪಟ್ಟಣ, ಹೊಂಗನೂರು, ವಿರುಪಾಕ್ಷಪುರ, ಮಂಡ್ಯ, ಮೈಸೂರು, ಶ್ರೀರಂಗಪಟ್ಟಣ, ಮಾಗಡಿ, ತುಮಕೂರು ಮುಂತಾದ ಕಡೆ ಚಿತ್ರೀಕರಣ ನಡೆಸಲಾಗಿದೆ.

ಮೊದಲ ಬಾರಿಗೆ ಅಜಯ್ ರಾವ್ ಅವರು ಹಳ್ಳಿ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಟಿ ಸಂಜನಾ ಅವರು ಕೂಡ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಟಿ ಆರ್ ಚಂದ್ರಶೇಖರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಈಗಾಗಲೇ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಚಿತ್ರವನ್ನು ವೀಕ್ಷಿಸಿದ ಕಲಾವಿದರು ಚಿತ್ರವೂ ಉತ್ತಮವಾಗಿ ಮೂಡಿಬಂದಿದೆ ಎಂದು ಹೇಳಿದ್ದಾರೆ. ಇನ್ನು ಶೋಕಿವಾಲಾ ಚಿತ್ರಕ್ಕೆ ಜಯಂತ್ ಕಾಯ್ಕಿಣಿ, ನಾಗೇಂದ್ರಪ್ರಸಾದ್, ಚೇತನ್ ಕುಮಾರ್ ಅವರು ಸಾಹಿತ್ಯವನ್ನು ನೀಡಿದ್ದು, ಶರತ್ ಲೋಹಿತಾಶ್ವ, ಗಿರೀಶ್ ಶಿವಣ್ಣ, ತಬಲಾನಾಣಿ, ಮುನಿರಾಜ್, ಪ್ರಮೋದ್ ಶೆಟ್ಟಿ, ಚಂದನಾ, ಲಾಸ್ಯ ಹೀಗೆ ಹಲವರು ಈ ಚಿತ್ರದ ತಾರಾಗಣದಲ್ಲಿದ್ದಾರೆ.

50 ದಿನದಲ್ಲಿ ಮುಗಿಯಬೇಕಿದ್ದ ಚಿತ್ರೀಕರಣ 45 ದಿನದಲ್ಲಿ ಮುಗಿದಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಆರಂಭದಿಂದಲೂ ವಿಭಿನ್ನ ರೀತಿಯಲ್ಲಿ ಸದ್ದು ಮಾಡುತ್ತಿರುವ ಶೋಕಿಲಾಲ ಚಿತ್ರತಂಡದಿಂದ ಇದೀಗ ಹೊಸ ನ್ಯೂಸ್ ಬಂದಿದೆ. ಹೌದು ಶೋಕಿವಾಲ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಸಿಕ್ಕಿದ್ದು, ಮಂಡಳಿಯಿಂದ ಪ್ರಶಂಸೆಯನ್ನು ಪಡೆದಿದೆ. ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಶೋಕಿವಾಲ ಚಿತ್ರದ ನಿರ್ಮಾಪಕರಾದ ಆರ್ ಚಂದ್ರಶೇಖರ್ ಅವರು ಸದ್ಯದಲ್ಲಿಯೇ ಚಿತ್ರವು ತೆರೆಗೆ ಬರಲು ಸಜ್ಜಾಗಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.

%d bloggers like this: