ಭರ್ಜರಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಮಿಳು ಸೂಪರ್ಸ್ಟಾರ್ ದಳಪತಿ ವಿಜಯ್

ದಕ್ಷಿಣ ಭಾರತದ ಜನಪ್ರಿಯ ತಮಿಳು ಚಿತ್ರರಂಗದ ದಳಪತಿ ನಟ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾ ಪಂಚಭಾಷೆಗಳಲ್ಲಿ ಬಿಡುಗಡೆ, ಲಾಕ್ ಡೌನ್ ಬಳಿಕ ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿರುವ ಮೊದಲ ಸ್ಟಾರ್ ಸಿನಿಮಾ ಮಾಸ್ಟರ್ ಐದು ಭಾಷೆಗಳಲ್ಲಿ ದೇಶಾದ್ಯಂತ ರಿಲೀಸ್ ಗೆ ಸಿದ್ದತೆ ನಡೆಸಿದೆ. ಮಾಸ್ಟರ್ ಸಿನಿಮಾ ಪೋಸ್ಟರ್ ಮೂಲಕವೇ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಉಂಟುಮಾಡಿದ್ದು ಚಿತ್ರ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕೊರೋನ ವೈರಸ್ ಜೊತೆಗೆ ಬ್ರಿಟನ್ ವೈರಸ್ ಹರಡುವ ಬಗ್ಗೆ ಎಚ್ಚರ ವಹಿಸುತ್ತಿರುವ ನಡುವೆ ಈ ಮಾಸ್ಟರ್ ಸಿನಿಮಾ ಬಿಡುಗಡೆಯಾಗುತ್ತಿರುವುದು ನಿಜಕ್ಕೂ ಸವಾಲಾಗಿದೆ. ಕಾರಣ ಇಂತಹ ಪರಿಸ್ಥಿತಿಯಲ್ಲಿ ಚಿತ್ರಮಂದಿರಕ್ಕೆ ಸಿನಿ ಪ್ರೇಕ್ಷಕರು ಬರುತ್ತಾರಾ, ಇಲ್ಲವೋ ಎಂಬ ಆತಂಕ ಕೂಡ ಚಿತ್ರತಂಡಕ್ಕೆ ಇದ್ದು ಧೈರ್ಯವಾಗಿ ಬಿಡುಗಡೆ ಮಾಡುತ್ತಿದ್ದಾರೆ.

ನಟ ವಿಜಯ್ ಅವರು ತಮಿಳುನಾಡು ಅಲ್ಲದೆ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿರುವುದರಿಂದ ಸಿನಿಮಾ ಖಂಡಿತಾ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ, ಈ ಮಾಸ್ಟರ್ ಸಿನಿಮಾದಲ್ಲಿ ದಳಪತಿ ವಿಜಯ್ ಜೊತೆಗೆ ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ಈ ಮಾಸ್ಟರ್ ತಮಿಳು, ತೆಲುಗು, ಮಲೆಯಾಳಂ, ಹಿಂದಿ ಇದರ ಜೊತೆಗೆ ಕನ್ನಡದಲ್ಲೂ ಸಹ ಡಬ್ಬಿಂಗ್ ಅಗಿ ಕರ್ನಾಟಕದಲ್ಲಿಯೂ ಸಹ ಮಾಸ್ಟರ್ ಸಿನಿಮಾ ಬಿಡುಗಡೆ ಆಗುತ್ತಿರುವುದು ವಿಶೇಷವಾಗಿದೆ. ಮೊಟ್ಟ ಮೊದಲ ಬಾರಿಗೆ ವಿಜಯ್ ನಟನೆಯ ಚಿತ್ರ ಕನ್ನಡಕ್ಕೆ ಡಬ್ಬಿ ಆಗಿ ಚಿತ್ರಮಂದಿರದಲ್ಲಿ ತೆರೆಕಾಣುತ್ತಿದ್ದು ಇದರ ಬಗ್ಗೆ ಪ್ರೇಕ್ಷಕರು ಏನು ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ಈಗಾಗಲೇ ಮಾಸ್ಟರ್ ಚಿತ್ರದ ಪೋಸ್ಟರ್ ಕನ್ನಡದಲ್ಲಿ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನು ಈ ಮಾಸ್ಟರ್ ಚಿತ್ರ ಎಕ್ಸ್. ಬಿ.ಫಿಲ್ಮ್ ಬ್ಯಾನರ್ ಅಡಿ ನಿರ್ಮಾಣಗೊಂಡಿದ್ದು, ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶಕರಾಗಿ ಅನಿರುದ್ದ ರವಿಚಂದರ್ ಕೆಲಸ ಮಾಡಿದ್ದು ಈ ಚಿತ್ರದಲ್ಲಿ ನಾಯಕಿಯಾಗಿ ಮಾಳವಿಕಾ ಮೋಹನನ್ ಅಭಿನಯಿಸಿದ್ದಾರೆ. ಈ ಮಾಸ್ಟರ್ ಚಿತ್ರಕ್ಕೆ ಯುಎ ಸರ್ಟಿಫಿಕೆಟ್ ದೊರೆತಿದೆ. ಇದೇ ಜನವರಿ 13 ರಂದು ಬಿಡುಗೊಳ್ಳಲು ಸಿದ್ದವಾಗಿದೆ, ಮಾಸ್ಟರ್ ಸಿನಿಮಾ ಬಿಡುಗಡೆಗೊಳ್ಳುತ್ತಿರುವ ವಿಚಾರವಾಗಿ ನಟ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿ ಪಳನೀಸ್ವಾಮಿಯವರನ್ನು ಭೇಟಿ ಮಾಡಿ ಚಿತ್ರಮಂದಿರಗಳಲ್ಲಿ ಶೇಕಡಾ ನೂರರಷ್ಟು ಸೀಟು ಭರ್ತಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಪತ್ರ ನೀಡಿದ್ದಾರೆ ಎನ್ನಲಾಗಿದೆ.

%d bloggers like this: