ಹ್ಯಾಟ್ರಿಕ್ ಡೈರೆಕ್ಟರ್ ಜೋಗಿ ಪ್ರೇಮ್ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಿದ್ದಾರೆ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನ ಕಳೆದಂತೆ ನಿರಂತರವಾಗಿ ಏರಿಕೆ ಆಗುತ್ತಿದೆ. ಇದರ ಜೊತೆಗೆ ರೂಪಾಂತರಿ ವೈರಸ್ ಓಮೈಕ್ರಾನ್ ವೈರಸ್ ಕೂಡ ರಾಜ್ಯದಲ್ಲಿ ವೇಗವಾಗಿ ಹರಡುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗೃತ ಕ್ರಮವಾಗಿ ಕಟ್ಟು ನಿಟ್ಟಿನ ಮಾರ್ಗಸೂಚಿಯ ಅನುಸಾರ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಸಿನಿಮಾ ಮಂದಿರಗಳು, ಸ್ವಿಮ್ಮಿಂಗ್ ಪೂಲ್, ಮಾಲ್ ಗಳಲ್ಲಿ ಶೇಕಡಾ ಐವತ್ತರಷ್ಟು ಮಾತ್ರ ಅವಕಾಶ ಮಾಡಲಾಗಿದೆ. ಇದರಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟವಾಗಲಿದೆ. ಅದರಂತೆ ಬಿಡುಗಡೆಗೆ ಸಿದ್ದವಾಗಿದ್ದಂತಹ ಸಿನಿಮಾಗಳು ಓಮೈಕ್ರಾನ್ ವೈರಸ್ ಮತ್ತು ಕೋವಿಡ್ ಮೂರನೇ ಅಲೆಯ ಆತಂಕಕ್ಕೆ ತಮ್ಮ ಚಿತ್ರದ ರಿಲೀಸಿಂಗ್ ಡೇಟ್ ಅನ್ನು ಮುಂದೂಡಿಕೆ ಮಾಡುತ್ತಿದ್ದಾರೆ.

ಇದೇ ಜನವರಿ 21 ಕ್ಕೆ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿತ್ತು. ಈ ಚಿತ್ರಕ್ಕೆ ರಕ್ಷಿತಾ ಪ್ರೇಮ್ ಬಂಡವಾಳ ಹೂಡಿದ್ದರು. ನಟಿ ರಕ್ಷಿತಾ ಪ್ರೇಮ್ ಅವರು ತಮ್ಮ ಸೋದರ ರಾಣಾ ಅವರನ್ನ ಬೆಳ್ಳಿತೆರೆಗೆ ಪರಿಚಯಿಸುತ್ತಿರುವ ಏಕ್ ಲವ್ ಯಾ ಚಿತ್ರಕ್ಕೆ ಕೋವಿಡ್ ಲಾಕ್ ಡೌನ್ ಕರ್ಫ್ಯೂ ಅಡ್ಡಿಯಾಗುತ್ತಿರುವುದರಿಂದ ಬೇಸರ ವ್ಯಕ್ತಪಡಿಸಿದ್ದಾರೆ. ಏಕ್ ಲವ್ ಯ್ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿರುವ ರಾಣಾ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ನಟಿಸಿದ್ದಾರೆ. ಮ್ಯಾಜಿ಼ಕಲ್ ಕಂಪೋಸರ್ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯಾ ಅವರ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ.



ಏಕ್ ಲವ್ ಯಾ ಸಿನಿಮಾದ ಹಾಡುಗಳ ಕೇಳಿ ಸಿನಿ ಪ್ರೇಕ್ಷಕರು ಕೂಡ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಇದೀಗ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಆದ ಕಾರಣ ಏಕ್ ಲವ್ ಯಾ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದ್ದು, ಈ ಬಗ್ಗೆ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ಅವರು ನಾಡಿನ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ. ಇನ್ನು ಇದರ ಜೊತೆಗೆ ಲೂಸ್ ಮಾದ ಯೋಗಿ ಅಭಿನಯದ ದಯಾಳ್ ಪದ್ಮನಾಭನ್ ನಿರ್ದೇಶನದ ಒಂಭತ್ತನೇ ದಿಕ್ಕು ಎಂಬ ಚಿತ್ರವನ್ನು ಇದೇ ಜನವರಿ 28 ರಂದು ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಬಾಲಿವುಡ್ ಸ್ಟಾರ್ ನಟ ಶಾಹಿದ್ ಕಪೂರ್ ಮತ್ತು ನಟಿ ಮೃನಾಲ್ ಥಾಕೂರ್ ಅಭಿನಯದ ಜೆರ್ಸಿ ಸಿನಿಮಾವನ್ನು ಕೂಡ ಮುಂದೂಡಲಾಗಿರುವುದಾಗಿ ತಿಳಿಸಿತ್ತು.