ಕೊರೊನ ಲಸಿಕೆಯನ್ನು ಜನರಿಗೆ ಉಚಿತವಾಗಿ ನೀಡಲು ತೀರ್ಮಾನಿಸಿದ ಈ ರಾಜ್ಯದ ಮುಖ್ಯಮಂತ್ರಿ

ದೆಹಲಿ ಜನರಿಗೆ ಅರವಿಂದ್ ಕೇಜ್ರೀವಾಲ್ ಉಚಿತವಾಗಿ ಕೋವಿಡ್ ಲಸಿಕೆ! ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರು ದೆಹಲಿ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆಯಾದ ಕೋವ್ಯಾಕ್ಸಿನ್ ನೀಡುವುದಾಗಿ ತೀರ್ಮಾನಿಸಿದ್ದಾರೆ. ಆದರೆ ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಂದ ಇನ್ನು ಹಸಿರು ನಿಶಾನೆ ಸಿಕ್ಕಿಲ್ಲ. ಕೊರೋನ ವೈರಸ್ ಸೋಂಕು ನಿವಾರಣೆಯ ಲಸಿಕೆಗೆ ಎರಡು ಕಂಪನಿಗೆ ಅನುಮತಿ ನೀಡಲಾಗಿದೆ. ಹೈದರಾಬಾದ್ ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸಿರುವ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಅನ್ನು ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ ಸಿಗಬೇಕು, ಇದರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ.

ಈ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ನೀಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಕೊರೋನ ವಾರಿಯರ್ಸ್, ಆಶಾ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ಹೀಗೆ 51 ಲಕ್ಷ ಮಂದಿಯನ್ನು ಗುರುತಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ವಕ್ತಾರ ಆಗಿರುವ ರಾಘವ್ ವದ್ದಾ ತಿಳಿಸಿದ್ದಾರೆ. ಆದರೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಯಾವುದೇ ರೀತಿಯ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಕರ್ನಾಟಕ ರಾಜ್ಯದಲ್ಲಿಯೂ ಸಹ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡದೆ 250 ರೂಗಳನ್ನು ನಿಗದಿ ಮಾಡಲಾಗಿದೆ. ಆದರೆ ದೇಶದ ಪ್ರತಿಯೊಬ್ಬರಿಗೂ ಕೂಡ ಉಚಿತ ಕೋವಿಡ್ ಲಸಿಕೆಯನ್ನು ನೀಡಬೇಕೆಂದು ಸಾರ್ವಜನಿಕರಿಂದ ಮನವಿ ಕೇಳಿಬರುತ್ತಿದೆ.

%d bloggers like this: