ರಿಲೀಸ್ ಗೂ ಮುನ್ನವೇ ದಾಖಲೆಯ ಮೊತ್ತಕ್ಕೆ ಮಾರಾಟವಾದ ಕನ್ನಡದ ಬಹು ನಿರೀಕ್ಷಿತ ಚಿತ್ರ, ಇತ್ತೀಚೆಗೆ ಕನ್ನಡ ಸಿನಿಮಾಗಳು ಯಾವ ಪರಭಾಷೆ ಇರಲಿ ವಿದೇಶಿ ಸಿನಿಮಾಗಳಿಗೂ ಕೂಡ ಕಡಿಮೆ ಇಲ್ಲದಂತೆ ತಯಾರಾಗುತ್ತಿದ್ದಾವೆ. ಅದು ಚಿತ್ರದ ಕಥೆ, ಸಿನಿಮಾ ಮೇಕಿಂಗ್, ಕ್ಯಾಮೆರಾ ಜೊತೆಗೆ ಅತ್ಯಾಧುನಿಕ ತಾಂತ್ರಿಕತೆ ಬಳಸಿಕೊಂಡು ಅದ್ದೂರಿಯಾಗಿ ನೂರು ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಂತಹ ಸಿನಿಮಾಗಳ ಪೈಕಿ ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಕೂಡ ಒಂದಾಗಿದೆ. ಹೌದು ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಈ ವರ್ಷದ ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಅಧಿಕೃತವಾಗಿ ಘೋಷಿಸಿದೆ.

ಇಡೀ ಭಾರತೀಯ ಚಿತ್ರರಂಗವೇ ಕುತೂಹಲದಿಂದ ಕಾಯುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಸಿನಿಮಾದ ತಂಡ ಈಗಾಗಲೇ ತನ್ನ ಎಲ್ಲಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನ ಮುಗಿಸಿಕೊಂಡು ರಿಲೀಸ್ ಗೆ ಸಿದ್ದವಾಗಿದೆ. ಅನೂಪ್ ಭಂಡಾರಿ ಅವರ ಕಲ್ಪನೆಯಲ್ಲಿ ಮೂಡಿ ಬಂದಿರುವ ಈ ವಿಕ್ರಾಂತ್ ರೋಣ ಸಿನಿಮಾ ಈಗಾಗಲೇ ಟೀಸರ್ ಟ್ರೇಲರ್ ಮೂಲಕ ಭಾರಿ ಸದ್ದು ಮಾಡಿದೆ. ಬಿ.ಅಜನೀಶ್ ಲೋಕನಾಥ್ ವಿಕ್ರಾಂತ್ ರೋಣ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದು, ನಿರ್ಮಾಪಕ ಜಾಕ್ ಮಂಜು ಅವರು ಬಂಡವಾಳ ಹೂಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ವಿಕ್ರಾಂತ್ ರೋಣ ಸಿನಿಮಾವನ್ನು ಪ್ರತಿಷ್ಟಿತ ಓಟಿಟಿ ಸಂಸ್ದೆಗೆ ಮಾರಾಟ ಮಾಡಲಾಗುತ್ತದೆ ಎಂದು ಸುದ್ದಿ ಕೇಳಿ ಬಂದಿತ್ತು.

ಅದರಂತೆ ನಿರ್ಮಾಪಕ ಜಾಕ್ ಮಂಜು ಕೂಡ ವಿಕ್ರಾಂತ್ ರೋಣ ಚಿತ್ರವನ್ನು ಓಟಿಟಿಗೆ ಮಾರಾಟ ಮಾಡುತ್ತೇವೆ. ಆದರೆ ಅದಕ್ಕಿಂತ ಮೊದಲು ದೇಶಾದ್ಯಂತ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದರು. ಇದೀಗ ಜಾಕ್ ಮಂಜು ಅವರು ನೀಡಿದ ಹೇಳಿಕೆಗೆ ಪೂರಕವಾಗಿ ವಿಕ್ರಾಂತ್ ರೋಣ ಸಿನಿಮಾವನ್ನು ಜೀ಼ ಫೈವ್ ಓಟಿಟಿ ಪ್ಲಾಟ್ ಫಾರ್ಮ್ ಮತ್ತು ಸ್ಯಾಟ್ ಲೈಟ್ ರೈಟ್ಸ್ ಹಕ್ಕನ್ನು ಜೀ಼ ಕನ್ನಡ ವಾಹಿನಿಗೆ ಬರೋಬ್ಬರಿ ಇಪ್ಪತ್ನಾಲ್ಕು ಕೋಟಿಗೆ ಮಾರಾಟ ಮಾಡಿದ್ದಾರೆ ಎಂಬ ಬ್ರೇಕಿಂಗ್ ಸುದ್ದಿ ಹೊರ ಬಿದ್ದಿದೆ. ಇಷ್ಟು ದೊಡ್ಡ ಮೊತ್ತಕ್ಕೆ ಸೇಲ್ ಆಗಿರುವ ಕನ್ನಡದ ಮೊದಲ ಸಿನಿಮಾ ಎಂಬ ಕೀರ್ತಿಗೆ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರ ಪಾತ್ರವಾಗಿದೆ. ಒಟ್ಟಾರೆಯಾಗಿ ಇಡೀ ಭಾರತೀಯ ಚಿತ್ರರಂಗ ಮತ್ತು ಕಿಚ್ಚನ ಅಭಿಮಾನಿಗಳು ವಿಕ್ರಾಂತ್ ರೋಣ ಚಿತ್ರವನ್ನು ಕಣ್ತುಂಬಿ ಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.