ದುಬೈನ ಪ್ರತಿಷ್ಠಿತ ಗೋಲ್ಡನ್ ವೀಸಾ ಪಡೆದ ಕನ್ನಡದ ಮೊದಲ ನಟಿ

2010ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪೊರ್ಕಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಜಗತ್ತಿಗೆ ಪದಾರ್ಪಣೆ ಮಾಡಿದ ನಟಿ ಪ್ರಣೀತಾ. ಇದುವರೆಗೆ ಕನ್ನಡದಲ್ಲಿ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲೂ ಸಿನಿಮಾ ಮಾಡುವುದರ ಮೂಲಕ, ದಕ್ಷಿಣ ಭಾರತದ ಖ್ಯಾತ ನಟಿ ಎನಿಸಿಕೊಂಡಿದ್ದಾರೆ. ಹಲವು ಕನ್ನಡದ ಸ್ಟಾರ್ ನಟರ ಜೊತೆ ನಟಿಸಿದ ಈ ನಟಿ ಟಾಲಿವುಡ್, ಕಾಲಿವುಡ್ ನಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ದಕ್ಷಿಣ ಭಾರತದ ಬಹುತೇಕ ಸ್ಟಾರ್ ನಟರ ಜೊತೆ ನಟಿಸಿರುವ ಇವರು ಹಿಂದಿ ಚಿತ್ರಗಳಲ್ಲೂ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಹೌದು ನಟಿ ಪ್ರಣೀತಾ ಅವರು ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಇತ್ತೀಚೆಗೆ ವಿವಾಹ ಜೀವನಕ್ಕೆ ಕಾಲಿಟ್ಟ ಇವರು ಸದ್ಯಕ್ಕೆ ಸಮಾಜಸೇವೆಯಲ್ಲಿ ಬಿಸಿಯಾಗಿದ್ದಾರೆ. ಕೊರೋನಾ ಸಮಯದಲ್ಲಿ ಅದೆಷ್ಟೋ ಜನರಿಗೆ ನಟಿ ಪ್ರಣೀತಾ ಅವರು ಸಹಾಯ ಮಾಡಿದ್ದಾರೆ. ಸದ್ಯಕ್ಕೆ ನಟಿ ಪ್ರಣೀತಾ ಅವರು ವಿದೇಶದ ಗೋಲ್ಡನ್ ವೀಸಾ ಪಡೆಯುವುದರ ಮೂಲಕ ಸುದ್ದಿಯಲ್ಲಿದ್ದಾರೆ. ಹೌದು ಯುಎಇ ಅರಬ್ ಎಮಿರೇಟ್ಸ್ ನಿಂದ ಗೋಲ್ಡನ್ ವೀಸಾವನ್ನು ನಟಿ ಪ್ರನೀತಾ ಪಡೆದುಕೊಂಡಿದ್ದಾರೆ. ಯುಎಇ ಅರಬ್ ಎಮಿರೇಟ್ಸ್ ನಿಂದ ಗೋಲ್ಡನ್ ವೀಸಾವನ್ನು ಪಡೆಯುವುದರಿಂದ ಬೇರೆ ರಾಷ್ಟ್ರದ ಪ್ರಜೆಗಳು ಅರಬ್ ನಲ್ಲಿ ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ ಅವಕಾಶಗಳು ದೊರೆಯುತ್ತವೆ.

ಈ ಗೌರವವನ್ನು ಕನ್ನಡದ ನಟಿ ಪ್ರಣೀತಾ ಪಡೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಇದರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಣಿತಾ, ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಗೌರವದ ವಿಷಯವಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ಅಭಿಮಾನಿಗಳು ನಟಿ ಪ್ರಣೀತಾ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇತ್ತೀಚೆಗೆ ತೆಲುಗು ನಟಿ ಕಾಜಲ್ ಅಗರ್ವಾಲ್ ಕೂಡ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಗೋಲ್ಡನ್ ವೀಸಾ ಪಡೆದುಕೊಂಡಿದ್ದರು.

%d bloggers like this: