2018ರಲ್ಲಿ ತೆರೆಕಂಡ ತೆಲುಗಿನ ಗೀತ ಗೋವಿಂದಂ ಚಿತ್ರದಲ್ಲಿ ಜೋಡಿಯಾಗಿ ಕಾಣಿಸಿಕೊಂಡ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಈ ಚಿತ್ರದ ಯಶಸ್ಸು ಇವರಿಬ್ಬರ ಸಿನಿ ಕೆರಿಯರ್ ಗೆ ಒಂದು ಹೊಸ ರೀತಿಯ ತಿರುವನ್ನು ನೀಡಿತು. ಟಾಲಿವುಡ್ ನಲ್ಲಿ ಈ ಜೋಡಿ ಕ್ಯುಟ್ ಪೇರ್ ಆಗಿದ್ದ ಕಾರಣ ಮತ್ತೆ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೊತೆಯಾಗಿ ಡಿಯರ್ ಕಾಮ್ರೆಡ್ ಎಂಬ ಚಿತ್ರದಲ್ಲಿ ಕಾಣಿಸಿಕೊಂಡರು. ಆಗಾಗ ಅನೇಕ ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರು ಕೂಡ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಈ ಬಗ್ಗೆ ಅವರಿಬ್ಬರು ಎಲ್ಲಿಯೂ ಕೂಡ ಸ್ಪಷ್ಟನೆ ನೀಡದೇ ನಾವಿಬ್ಬರು ಉತ್ತಮ ಸ್ನೇಹಿತರು ಎಂದು ಉತ್ತರ ನೀಡುತ್ತಾ ಬಂದಿದ್ದಾರೆ.

ಇತ್ತೀಚೆಗಷ್ಟೇ ರೆಸ್ಟೋರೆಂಟ್ ವೊಂದಕ್ಕೆ ಡಿನ್ನರ್ ಪಾರ್ಟಿಗೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಜೊತೆಯಾಗಿ ಹೋಗಿದ್ದರು. ಇದೂ ಕೂಡ ಇವಲಿಬ್ಬರ ಮೇಲೆ ಅನುಮಾನ ಬರಲು ಕಾರಣವಾಯಿತು. ಇದೀಗ 2022 ಹೊಸ ವರ್ಷ ಬರ ಮಾಡಿಕೊಳ್ಳಲು ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೊತೆಯಾಗಿ ಗೋವಾಗೆ ಹೋಗಿದ್ದಾರೆ. ಇನ್ನು ಸದ್ಯಕ್ಕೆ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನು ವಿಜಯ್ ದೇವರಕೊಂಡ ಇದೇ ಮೊದಲ ಬಾರಿಗೆ ಲೈಗರ್ ಎಂಬ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.



ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ಹೊತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದೇವರ ಕೊಂಡ ಡಾನ್ ಮಗನ ಪಾತ್ರವನ್ನು ನಿರ್ವಹಿಸಲಿದ್ದಾರೆ. ವಿಜಯ್ಗೆ ಜೋಡಿಯಾಗಿ ಬಾಲಿವುಡ್ ಖ್ಯಾತ ನಟಿ ಅನನ್ಯಾ ಪಾಂಡೆ ನಟಿಸುತ್ತಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದ ಪುಷ್ಪ ಸಿನಿಮಾ ಬಾಕ್ಸ್ ಆಫಿಸ್ ನಲ್ಲಿ ನೂರಾರು ಕೋಟಿ ಲೂಟಿ ಮಾಡಿ ಭಾರಿ ಸೌಂಡ್ ಮಾಡುತ್ತಿದೆ. ಇದೀಗ ಆದವಾಳು ಮೀಕು ಜೋರು ಎಂಬ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರದಲ್ಲಿ ನಾಯಕ ನಟರಾಗಿ ಶರ್ವಾನಂದ್ ಅಭಿನಯಿಸುತ್ತಿದ್ದಾರೆ. ಒಟ್ಟಾರೆಯಾಗಿ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈ ಇಬ್ಬರು ಸ್ಟಾರ್ಸ್ ಸದ್ಯಕ್ಕೆ ಭಾರತೀಯ ಚಿತ್ರರಂಗದ ಕ್ಯೂಟ್ ಜೋಡಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.