ಸದ್ಯಕ್ಕೆ ಭಾರತೀಯ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ಮತ್ತು ಸಖತ್ ಬೇಡಿಕೆಯಲ್ಲಿರುವ ನಟಿ ಅಂದರೆ ಅದು ರಶ್ಮಿಕಾ ಮಂದಣ್ಣ. ರಕ್ಷಿತ್ ಶೆಟ್ಟಿ ಅವರ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟಿಸಿ ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ರಶ್ಮಿಕಾ ಮಂದಣ್ಣ ಇಂದು ತೆಲುಗು, ತಮಿಳು, ಹಿಂದಿ ಭಾಷೆಯ ಸಿನಿಮಾಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿ ಸುಪ್ರಸಿದ್ದ ನಟಿಯಾಗಿ ಮಿಂಚುತ್ತಿದ್ದಾರೆ. ಕಿರಿಕ್ ಪಾರ್ಟಿ ಚಿತ್ರ ಸೂಪರ್ ಹಿಟ್ ಆಗಿದ್ದೇ ತಡ ರಶ್ಮಿಕಾ ಮಂದಣ್ಣ ಅವರಿಗೆ ತೆಲುಗಿನಲ್ಲಿ ಸ್ಟಾರ್ ನಟ ವಿಜಯ್ ದೇವರಕೊಂಡ ಅವರ ಜೊತೆ ನಟಿಸುವ ಅವಕಾಶ ಒದಗಿ ಬರುತ್ತದೆ. ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡ ಅವರೊಟ್ಟಿಗೆ ನಟಿಸಿದ ಗೀತಾ ಗೋವಿಂದಂ ಚಿತ್ರ ಕೂಡ ಸೂಪರ್ ಹಿಟ್ ಆಗುತ್ತೆ. ಇದಾದ ಬಳಿಕ ತಮಿಳಿನಲ್ಲಿ ಕಾರ್ತಿ ಅವರೊಟ್ಟಿಗೆ ಸಿನಿಮಾ ಮಾಡ್ತಾರೆ.

ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್ ನಲ್ಲಿಯೂ ಕೂಡ ಅವಕಾಶ ಕೈ ಬೀಸಿ ಕರೆಯುತ್ತದೆ. ಬಾಲಿವುಡ್ ಸ್ಟಾರ್ ನಟರಾದ ಸಿದ್ದಾರ್ಥ್ ಮಲ್ಹೋತ್ರಾ ಅವರೊಟ್ಟಿಗೆ ಮಿಶನ್ ಮಜ್ನು ಚಿತ್ರದ ಮೂಲಕ ಬಾಲಿವುಡ್ ಅಂಗಳಕ್ಕೆ ಹೆಜ್ಜೆ ಇಟ್ಟ ರಶ್ಮಿಕಾಗೆ ಅದೃಷ್ಟ ಎಂಬಂತೆ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಗುಡ್ ಬೈ ಸಿನಿಮಾದಲ್ಲಿ ಕೂಡ ಚಾನ್ಸ್ ಸಿಗುತ್ತದೆ. ಅಷ್ಟೇ ಅಲ್ಲದೆ ರಣ್ ಬೀರ್ ಕಪೂರ್ ಅವರ ಅನಿಮಲ್ ಎಂಬ ಸಿನಿಮಾದಲ್ಲಿ ಕೂಡ ಅವಕಾಶ. ಹೀಗೆ ನಟಿ ರಶ್ಮಿಕಾ ಮಂದಣ್ಣ ತನ್ನ ಸಿನಿ ಬದುಕಿನಲ್ಲಿ ತುಂಬಾ ಪ್ರವರ್ಧಮಾನಕ್ಕೆ ಬಂದು ಭಾರತೀಯ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ.



ಇದೀಗ ಬಾಲಿವುಡ್ ನಲ್ಲಿ ಮತ್ತೆ ಹೊಸ ಸಿನಿಮಾವೊಂದನ್ನ ಒಪ್ಪಿಕೊಂಡಿದ್ದಾರೆ ರಶ್ಮಿಕಾ ಮಂದಣ್ಣ. ಹೌದು ಬಾಲಿವುಡ್ ನ ಹ್ಯಾಂಡ್ಸಮ್ ಹಂಕ್ ಎಂದೇ ಕರೆಯಿಸಿಕೊಳ್ಳುವ ಎಂಗ್ ಅಂಡ್ ಎನರ್ಜೆಟಿಕ್ ಸ್ಟಾರ್ ನಟ ಟೈಗರ್ ಶ್ರಾಫ್ ಅವರ ಮುಂದಿನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರಂತೆ. ಈ ಚಿತ್ರವನ್ನು ಶಶಾಂಕ್ ಕೈತನ್ ನಿರ್ದೇಶನ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ನಟಿ ರಶ್ಮಿಕಾ ಮಂದಣ್ಣ ತಮಿಳಿನಲ್ಲಿ ವಾರಿಸು, ತೆಲುಗಿನಲ್ಲಿ ಪುಷ್ಪ2 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಹೀಗೆ ನಟಿ ರಶ್ಮಿಕಾ ಮಂದಣ್ಢ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುವುದರ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಖತ್ ಬೇಡಿಕೆಯನ್ನ ಸೃಷ್ಟಿಸಿಕೊಂಡಿದ್ದಾರೆ.