ಕನ್ನಡದ ಆರಡಿ ಕಟೌಟ್, ಬಾದ್ ಶಾ ಕಿಚ್ಚ ಸುದೀಪ್ ಕೇವಲ ಕನ್ನಡ ಮಾತ್ರ ಅಲ್ಲದೆ ಹಿಂದಿ, ತೆಲುಗು ಚಿತ್ರಗಳಲ್ಲಿಯೂ ಕೂಡ ನಟಿಸಿ ಭಾರತೀಯ ಚಿತ್ರರಂಗದಾದ್ಯಂತ ಅಪಾರ ಜನಪ್ರಿಯತೆಯ ಜೊತೆಗೆ ಅಪಾರ ಅಭಿಮಾನಿ ಬಳಗವನ್ನು ಕೂಡ ಹೊಂದಿದ್ದಾರೆ. ನಟ ಕಿಚ್ಚ ಸುದೀಪ್ ಅವರು ಕನ್ನಡದಲ್ಲಿ ಸೂಪರ್ ಸ್ಟಾರ್ ನಟನಾಗಿ ಮಿಂಚುತ್ತಿದ್ದಾರೆ. ಆದರೆ ಇದುವರೆಗೆ ಕಿಚ್ಚ ಸುದೀಪ್ ಅವರು ಪರಭಾಷಾ ಸಿನಿಮಾಗಳಲ್ಲಿ ಹೀರೋ ಆಗಿ ಕಾಣಿಸಿಕೊಂಡಿಲ್ಲ. ತೆಲುಗಿನ ಸ್ಟಾರ್ ನಿರ್ದೇಶಕ ರಾಜಮೌಳಿ ನಿರ್ದೇಶನದ ಈಗ ಸಿನಿಮಾದಲ್ಲಿ ಖಡಕ್ ವಿಲನ್ ಮತ್ತು ಬಾಹುಬಲಿ ಸಿನಿಮಾದಲ್ಲಿ ಪೋಷಕ ನಟನಾಗಿ, ಚಿರಂಜೀವಿ ಅವರ ಜೊತೆ ಸೈರಾ ನರಸಿಂಹ ರೆಡ್ಡಿ.

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸಿನಿಮಾದಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಭಾರತೀಯ ಚಿತ್ರರಂಗ ದಾದ್ಯಂತ ಗಮನ ಸೆಳೆದ ಕಿಚ್ಚ ಸುದೀಪ್ ಇದೀಗ ಪರಭಾಷೆಯಲ್ಲಿಯೂ ಕೂಡ ಹೀರೋ ಆಗಿ ನಟಿಸಲು ಸಿದ್ದರಾಗಿದ್ದಾರೆ. ಹೌದು ಇತ್ತೀಚೆಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೆ ರಿಲೀಸ್ ಆಗಿ ಬಾಕ್ಸ್ ಅಫೀಸ್ ಧೂಳ್ ಮಾಡಿದ ಕೋಟಿಗೊಬ್ಬ ಸಿನಿಮಾ ತೆಲುಗಿಗೆ ಡಬ್ ಆಗಿ ಬರಲಿದೆ. ಕೆ3 ಕೋಟಿಕೊಕ್ಕಡು ಟೈಟಲ್ ಮೂಲಕ ತೆಲುಗಿನಲ್ಲಿ ಕಿಚ್ಚ ಸುದೀಪ್ ಇದೇ ಫೆಬ್ರವರಿ 4ರಂದು ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಚಿತ್ರಮಂದಿರದಲ್ಲಿ ಅಬ್ಬರಿಸಲಿದ್ದಾರೆ.



ಇನ್ನು ಈ ಕೋಟಿಗೊಬ್ಬ3 ಸಿನಿಮಾಗೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದು, ಶಿವ ಕಾರ್ತಿಕ್ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಜೋಡಿಯಾಗಿ ದಕ್ಷಿಣ ಭಾರತದ ಸುಪ್ರಸಿದ್ದ ನಟಿ ಮಡೋನ್ನಾ ಸೆಬಾಸ್ಟಿನ್ ಮಡೋನ್ನಾ ನಟಿಸಿದ್ದಾರೆ. ಜೊತೆಗೆ ಸ್ಪೆಷಲ್ ಸಾಂಗ್ ವೊಂದರಲ್ಲಿ ನಟಿ ಆಶಿಕಾ ರಂಗನಾಥ್ ಕೂಡ ಸಖತ್ ಸ್ಟೆಪ್ ಹಾಕಿದ್ದಾರೆ. ಇನ್ನು ಪ್ರಮುಖ ಪಾತ್ರಗಳಲ್ಲಿ ರವಿಶಂಕರ್, ಶ್ರದ್ದಾ ದಾಸ್, ಅಫ್ತಾಬ್ ಶಿವದಾಸನಿ, ಡ್ಯಾನಿಶ್ ಅಕ್ತರ್ ಶಫಿ ನಟಿಸಿದ್ದಾರೆ. ಮ್ಯಾಜಿ಼ಕಲ್ ಕಂಪೋಸರ್ ಅರ್ಜುನ್ ಜನ್ಯಾ ಮ್ಯೂಸಿಕ್ ಮಾಡಿದ್ದಾರೆ. ಕನ್ನಡದಲ್ಲಿ ಸೂಪರ್ ಹಿಟ್ ಆಗಿರುವ ಕೋಟಿಗೊಬ್ಬ3 ಸಿನಿಮಾಗೆ ತೆಲುಗು ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನ ಫೆಬ್ರವರಿ 4ರವರೆಗೆ ಕಾದು ನೋಡ ಬೇಕಾಗಿದೆ.