ಇದೇ ವಾರ ಜಗತ್ತಿನಾದ್ಯಂತ ಪುನೀತ್ ರಾಜ್‍ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಚಿತ್ರವನ್ನು ನೋಡಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ ಬಂದಾಗಿದೆ. ಜೇಮ್ಸ್ ಚಿತ್ರ ರಿಲೀಸ್ ಆಗಲು ಕೌಂಟ್ ಡೌನ್ ಶುರುವಾಗಿದೆ. ಜೇಮ್ಸ್ ಚಿತ್ರದ ಫಸ್ಟ್ ಲುಕ್ ಹಾಗೂ ಟೀಸರ್ ನಿಂದಲೇ ಥ್ರಿಲ್ ಆಗಿರುವ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು, ಸಿನಿಮಾ ನೋಡಲು ಕಾದು ಕುಳಿತಿದ್ದಾರೆ. ಜೇಮ್ಸ್ ಚಿತ್ರವು ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರವಾದ್ದರಿಂದ ಈ ಚಿತ್ರದ ಮೇಲೆ ನಿರೀಕ್ಷೆಗಳು ನೂರೆಂಟಿವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದಂದು ಜೇಮ್ಸ್ ಬಿಡುಗಡೆಯಾಗುತ್ತಿರುವುದರಿಂದ ಅಪ್ಪು ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.

ಪುನೀತ್ ಅವರ ಕೊನೆಯ ಸಿನಿಮಾವನ್ನು ಅವರ ಹುಟ್ಟುಹಬ್ಬದಂದು ಅದ್ದೂರಿಯಾಗಿ ಬಿಡುಗಡೆ ಮಾಡಬೇಕು ಎಂದು ಚಿತ್ರತಂಡ ಪಣತೊಟ್ಟಿದೆ. ಹೀಗಾಗಿ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಜೇಮ್ಸ್ ಚಿತ್ರದ ಟೀಸರ್ ಬಿಡುಗಡೆಯಾಗುವುದಕ್ಕೂ ಮುನ್ನ ನಿರ್ದೇಶಕ ಬಹದ್ದೂರ್ ಚೇತನ್ ಅವರು ಮೆಗಾ ಪ್ರೀ ರಿಲೀಸ್ ಕಾರ್ಯಕ್ರಮ ಮಾಡುವುದಾಗಿ ಹೇಳಿದ್ದರು. ಈ ಮಾತಿನಂತೆ ಜೇಮ್ಸ್ ಚಿತ್ರತಂಡ ಬಿಡುಗಡೆಗೂ ಮುನ್ನವೇ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದೆ. ಮಾರ್ಚ್ 17 ರಂದು ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದಂದು ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲೂ ಜೇಮ್ಸ್ ಚಿತ್ರ ಬಿಡುಗಡೆಯಾಗಲಿದೆ.

ಜೇಮ್ಸ್ ಚಿತ್ರದ ರಿಲೀಸ್ ಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇರುವುದರಿಂದ, ಐದು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಚಿತ್ರತಂಡವು ಭರ್ಜರಿ ತಯಾರಿ ನಡೆಸುತ್ತಿದೆ. ಇತ್ತೀಚಿಗೆ ಜೇಮ್ಸ್ ಸಿನಿಮಾದಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ ಒಟ್ಟು ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ ಜೇಮ್ಸ್ ಚಿತ್ರವು ಯಾವ ಯಾವ ಸ್ಥಳಗಳಲ್ಲಿ, ಯಾವ ಯಾವ ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ ಎಂಬ ಮಾಹಿತಿಯನ್ನು ಚಿತ್ರತಂಡ ನೀಡಿದೆ. ಹೌದು ಒಟ್ಟು 15 ದೇಶಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಈ ಮೂಲಕ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರಪಂಚದ ಮೂಲೆ ಮೂಲೆಗೂ ತಲುಪಿಸುವುದು ಜೇಮ್ಸ್ ಚಿತ್ರತಂಡದ ಉದ್ದೇಶ.

ಜೇಮ್ಸ್ ಸಿನಿಮಾ ಜರ್ಮನಿ ಆಸ್ಟ್ರೇಲಿಯಾ, ಪೋಲ್ಯಾಂಡ್ ನೆದರ್ಲ್ಯಾಂಡ್, ಭಾರತ ಸೇರಿದಂತೆ 15 ದೇಶಗಳಲ್ಲಿ ರಿಲೀಸ್ ಆಗುತ್ತಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ವಿಷಯ ತಿಳಿದ ಅಭಿಮಾನಿಗಳ ಖುಷಿ ಹೆಚ್ಚಾಗಿದೆ. ಜೇಮ್ಸ್ ಚಿತ್ರದ ಒಂದು ಹಾಡು ಹಾಡು ಟ್ರೇಡ್ ಮಾರ್ಕ್ ಎನ್ನುವ ಸಾಹಿತ್ಯದಿಂದ ಶುರುವಾಗಲಿದ್ದು, ಚರಣರಾಜ್ ಸಂಗೀತಕ್ಕೆ ಚೇತನ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಹಾಡಿಗಾಗಿ ಬೆಂಗಳೂರಿನಲ್ಲಿ ಅದ್ಧೂರಿ ವೆಚ್ಚದ ಹಾಕಿ, ಪವರ್ ಸ್ಟಾರ್ ಪವರ್ ಫುಲ್ ಸ್ಟೆಪ್ ಗಳನ್ನು ಕಂಪೋಸ್ ಮಾಡಲಾಗಿದೆ.

ದೊಡ್ಮನೆ ಹುಡುಗ ರಾಜಕುಮಾರನನ್ನು ದೇವರಂತೆ ಆರಾಧಿಸುವ ಅಭಿಮಾನಿಗಳು ಜೇಮ್ಸ್ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇನ್ನೇನು ಸಮಯ ಬಂದಾಗಿದೆ. ಇತ್ತೀಚಿಗೆ ಜೇಮ್ಸ್ ಚಿತ್ರತಂಡ ಈ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿದೆ. ಹೌದು ಇಂದು ಸಂಜೆ 7 ಗಂಟೆಗೆ ಚಾಮರ ವಜ್ರ ಅರಮನೆ ಮೈದಾನದಲ್ಲಿ ಜೇಮ್ಸ್ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಶಿವರಾಜ್ ಕುಮಾರ್ ಸೇರಿದಂತೆ ಡಾಕ್ಟರ್ ರಾಜ್ ಕುಟುಂಬ ಹಾಗೂ ಚಿತ್ರರಂಗದ ಹಲವಾರು ಗಣ್ಯರು ಆಗಮಿಸಲಿದ್ದಾರೆ. ಜೊತೆಗೆ ಅಭಿಮಾನಿಗಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.

%d bloggers like this: