ಕಾಮಿಡಿ ಕಿಂಗ್ ನವರಸನಾಯಕ ಜಗ್ಗೇಶ್ ಅವರು ಹೊಸ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಿಟ್ ಶೋ, ಕಾಮಿಡಿ ಕಿಲಾಡಿಗಳು ಜಡ್ಜ್ ಆಗಿ ಎಲ್ಲರ ಮನೆ ಮಾತಾಗಿದ್ದ ಜಗ್ಗೇಶ್ ಅವರು, ಟಿವಿ ಶೋ ಗಳ ಜೊತೆಗೆ ಸಿನಿಮಾಗಳಲ್ಲೂ ಕೂಡ ಸಕ್ರಿಯರಾಗಿದ್ದಾರೆ. ಹಿರಿಯ ಕಾಮಿಡಿ ನಟರಾದರೂ ಕೂಡ ಈಗಲೂ ತಮ್ಮ ಅಭಿಮಾನಿಗಳಿಗೆ ತಮ್ಮ ಹಾಸ್ಯ ನಟನೆಯ ಮೂಲಕ ಎಲ್ಲರನ್ನು ರಂಜಿಸುವಲ್ಲಿ ಜಗ್ಗೇಶ್ ಸಫಲರಾಗಿದ್ದಾರೆ. ಯಾವಾಗಲೂ ಒಂದು ಉತ್ತಮ ಮೆಸೇಜ್ ನ್ನು ಹಾಸ್ಯದ ಮೂಲಕ ಜನರಿಗೆ ತಲುಪಿಸುವ ಚಿತ್ರಗಳನ್ನು ಜಗ್ಗೇಶ್ ಮಾಡುತ್ತಾರೆ. ಈ ಬಾರಿಯೂ ಕೂಡ ಸಮಾಜದ ಕೌಟುಂಬಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಕತೆಯನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

ಹಾಗೂ ಈ ಸಮಸ್ಯೆಗಳಿಂದ ಹೊರ ಬರುವ ವಿಚಾರವನ್ನು ಹಾಸ್ಯಸ್ಪದವಾಗಿ ತೋರಿಸಲು ಪ್ರಯತ್ನಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಜಗ್ಗೇಶ್ ಅವರ ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಅವರು ನಿರ್ದೇಶನ ಮಾಡಲಿದ್ದು ಈ ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಡಲಾಗಿದೆ. ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿ ನಟ ಜಗ್ಗೇಶ್ ಅವರು ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು, ಚಿತ್ರಕ್ಕೆ ನಾಯಕನಟಿ ಯಾರು ಎಂಬುದನ್ನು ನಿರ್ದೇಶಕ ಸಂತೋಷ್ ಆನಂದ್ ರಾವ್ ಅವರು ಬಿಟ್ಟುಕೊಟ್ಟಿರಲಿಲ್ಲ. ಆದರೆ ಇತ್ತೀಚೆಗೆ ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಹೇಳಿಕೊಂಡಿದ್ದು, ರಾಘವೇಂದ್ರ ಸ್ಟೋರ್ಸ್ ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್ ಅವರಿಗೆ ನಾಯಕಿಯಾಗಿ ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ಸಿನಿಮಾ ಖ್ಯಾತಿಯ ನಟಿ ಶ್ವೇತಾ ಶ್ರೀವಾತ್ಸವ್ ಅವರು ಕಾಣಿಸಿಕೊಳ್ಳಲಿದ್ದಾರೆ.



ನಟ ಜಗ್ಗೇಶ್ ಮತ್ತು ನಟಿ ಶ್ವೇತಾ ಶ್ರೀವಾತ್ಸವ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುವ ಮೊದಲ ಚಿತ್ರ ಇದಾಗಿದ್ದು, ಈಗಾಗಲೇ ಸಿನಿಮಾದ ಶೂಟಿಂಗ್ ಆರಂಭವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನು ಈ ಸಿನಿಮಾವನ್ನು ಹೊಂಬಾಳೆ ಸಿನಿಮಾ ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ಸಾಮಾಜಿಕ ಕೌಟುಂಬಿಕ ಸಮಸ್ಯೆಗಳನ್ನು ಹಾಸ್ಯಾಸ್ಪದವಾಗಿ ತೋರಿಸಲು ಪ್ರಯತ್ನಿಸಿದ್ದೇವೆ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಈ ವರ್ಷದ ಮಧ್ಯದಲ್ಲಿ ರಾಘವೇಂದ್ರ ಸ್ಟೋರ್ಸ್ ಥಿಯೇಟರ್ ಗಳಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.