ಕನ್ನಡ ಚಿತ್ರರಂಗಕ್ಕೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಎಂಟ್ರಿ

ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ ಈಗಾಗಲೇ ಭಾರತೀಯ ಚಿತ್ರರಂಗದಲ್ಲಿ ಭಾರಿ ಹವಾ ಹುಟ್ಟಿಸಿದೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಪುಷ್ಪ ಚಿತ್ರದ ಟೀಸರ್ ಬಿಡುಗಡೆ ಗೊಂಡಿತ್ತು. ಈ ಟೀಸರ್ ಅಲ್ಲಿ ಅಲ್ಲು ಅರ್ಜುನ್ ಹಿಂದಿನ ಯಾವ ಸಿನಿಮಾದಲ್ಲೂ ಕಾಣಿಸಿಕೊಳ್ಳದ ಗೆಟಪ್, ಖಡಕ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್ ಅವರ ಈ ಮಾಸ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಂದಹಾಗೆ ಭಾರತೀಯ ಚಿತ್ರರಂಗದ ಪ್ರಖ್ಯಾತ ನಿರ್ದೇಶಕರಾದ ಸುಕುಮಾರ್ ಅವರೊಂದಿಗೆ ಅಲ್ಲು ಅರ್ಜುನ್ ಆರ್ಯ ಮತ್ತು ಆರ್ಯ2 ಚಿತ್ರದಲ್ಲಿ ಅಭಿನಯಿಸಿದ್ದರು.

ಈ ಎರಡೂ ಚಿತ್ರಗಳು ಸೂಪರ್ ಹಿಟ್ ಆಗಿದ್ದವು, ಈಗ ಮತ್ತೆ ಈ ಜೋಡಿ ಒಂದಾಗಿದ್ದು ಹ್ಯಾಟ್ರಿಕ್ ಬಾರಿಸಲು ಸಿದ್ದವಾಗಿದೆ ಎನ್ನಬಹುದು. ಈ ಪುಷ್ಪ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಾಗುತ್ತಿದ್ದು, ಇದೇ ಆಗಸ್ಟ್ 13ರಂದು ಪುಷ್ಪ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಇನ್ನು ಸುಕುಮಾರ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ವಿಶೇಷವಾಗಿ ಪುಷ್ಪ ಚಿತ್ರದಲ್ಲಿ ಕನ್ನಡದ ಸ್ಟಾರ್ ನಟರಾಗಿರುವ ಡಾಲಿ ಧನಂಜಯ್ ಕೂಡ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜೊತೆಗೆ ಬಹುಭಾಷಾ ನಟ ಪ್ರಕಾಶ್ ರಾಜ್, ಜಗಪತಿ ಬಾಬು, ಸುನೀಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈತ್ರಿ ಮೂವೀಸ್ ಬ್ಯಾನರ್ ಅಲ್ಲಿ ನಿರ್ಮಾಣವಾಗಿರುವ ಪುಷ್ಪ ಸಿನಿಮಾ ತೆಲುಗು, ತಮಿಳು, ಮಲಯಾಳಂ, ಹಿಂದಿಯ ಜೊತೆಗೆ ಕನ್ನಡದ ಅವತರಣಿಕೆಯಲ್ಲಿ ಬಿಡುಗಡೆಯಾಗುತ್ತಿದೆ. ಬರೋಬ್ಬರಿ ನೂರು ಕೋಟಿ ಬಜೆಟ್ ನಲ್ಲಿ ತಯಾರಾಗಿರುವ ಈ ಚಿತ್ರ ಇದೇ ಆಗಸ್ಟ್ 13ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಿಗೆ ಲಗ್ಗೆ ಇಡಲು ಸಜ್ಜಾಗಿದ್ದು ಸಿನಿ ಪ್ರೇಕ್ಷಕರು ಈ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಮೂರು ಕನ್ನಡ ನಟರು ಈ ಚಿತ್ರದಲ್ಲಿದ್ದು ಕನ್ನಡಲ್ಲಿಯೂ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ. ಈ ಮೂಲಕ ತೆಲುಗು ನಟ ಅಲ್ಲೂ ಅರ್ಜುನ್ ಅವರು ನೇರವಾಗಿ ಕನ್ನಡ ಅವತಾರಿಕೆಯಲ್ಲಿ ಬರುತ್ತಿದ್ದು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಆದಂತೆ.

%d bloggers like this: