ಮತ್ತೆ ಸ್ಯಾಂಡಲ್ ವುಡ್ ನತ್ತ ಮುಖಮಾಡಿದ ಭಾರತೀಯ ಚಿತ್ರರಂಗದ ರಿಯಲಿಸ್ಟಿಕ್ ಸಿನಿಮಾಗಳ ಸರ್ದಾರ ಎನಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ನಿನ್ನೆ ಅಂದರೆ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದರು. ಸದಾ ಒಂದಲ್ಲ ಒಂದು ವಿವಾದ ಟೀಕೆಗಳಿಂದ ಚಾಲ್ತಿಯಲ್ಲಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬೆಂಗಳೂರಿಗೆ ಆಗಮಿಸಿದ್ದು ತಮ್ಮ ಚಿತ್ರದ ಪ್ರಮೋಶನ್ ಗಾಗಿ. ಹೌದು ರಾಮ್ ಗೋಪಾಲ್ ವರ್ಮಾ ಅವರು ಮಹಿಳಾ ಮಾರ್ಷಲ್ ಕ್ರೀಡಾಧಾರಿತ ಕಥೆಯನ್ನ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದ ಹೆಸರು ಹುಡುಗಿ. ಈ ಹುಡುಗಿ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು, ಮಲೆಯಾಳಂ ಸೇರಿದಂತೆ ಪಂಚ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಇದೊಂದು ತ್ರೀಕೋನ ಪ್ರೇಮ ಕಥೆಯನ್ನ ಹೊಂದಿರುವ ಮಾರ್ಷಲ್ ಆರ್ಟ್ ಕ್ರೀಡಾಪಟುವಿನ ಸಿನಿಮಾ ಆಗಿದೆಯಂತೆ.

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ ಮಾಡುವುದರಲ್ಲಿ ಸದಾ ಮುಂದೆ ಇರುತ್ತಾರೆ. ಅದೇ ರೀತಿ ಈಗ ರಾಮ್ ಗೋಪಾಲ್ ವರ್ಮಾ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಮಾರ್ಷಲ್ ಆರ್ಟ್ ಕಥೆಯನ್ನಾಧರಿಸಿದ ಹುಡುಗಿ ಎಂಬ ಸಿನಿಮಾ ಇದೇ ಜುಲೈ15ಕ್ಕೆ ದೇಶಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ವಿಶೇಷ ಅಂದರೆ ಈ ಚಿತ್ರ ಚೀನಾ ದೇಶದಲ್ಲಿ ಅತಿ ಹೆಚ್ಚು ಸಂಖ್ಯೆಯ ಥಿಯೇಟರ್ ಗಳಲ್ಲಿ ರಿಲೀಸ್ ಆಗುತ್ತಿದೆಯಂತೆ. ಈ ಹುಡುಗಿ ಚಿತ್ರದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಮ್ ಗೋಪಾಲ್ ವರ್ಮಾ ಇದೊಂದು ತುಂಬಾ ವಿಶೇಷವಾದ ಸಿನಿಮಾ. ನಾನು ಚಿಕ್ಕವನಿದ್ದಾಗ ಎಂಟರ್ ದಿ ಡ್ರ್ಯಾಗನ್ ಸಿನಿಮಾ ನೋಡಿದ್ದೆ.



ಆ ಕಥೆಯ ನಾಯಕ ಬ್ರೂಸ್ಲಿಯಿಂದ ಸ್ಪೂರ್ತಿಯಿಂದ ಈ ಸಿನಿಮಾ ಮಾಡಿದ್ದು, ಮಾರ್ಷಲ್ ಆರ್ಟ್ಸ್ ಸಂಬಂಧಪಟ್ಟ ಸಿನಿಮಾವಾಗಿದ್ದು, ಈ ಕಲೆ ಮಾಡುವವರ ಸಂಖ್ಯೆ ತೀರಾ ವಿರಳ. ಅದ್ರಲ್ಲೂ ಹೆಣ್ಣು ಮಕ್ಕಳು ಮಾಡೋದು ಕಡಿಮೆ. ನಾಯಕಿ ಪೂಜಾ ಹನ್ನೆರೆಡು ವರ್ಷದಿಂದ ಸಮರಕಲೆ ಅಭ್ಯಾಸ ಮಾಡ್ತಿದ್ದು, ಹೀಗಾಗಿ ಆಕೆಯನ್ನು ನಾಯಕಿಯನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು. ಇನ್ನು ಈ ಹುಡುಗಿ ಎಂಬ ಸಿನಿಮಾ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮಾರ್ಷಲ್ ಆರ್ಟ್ಸ್ ಹಿನ್ನೆಲೆಯಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ಸಿನಿಮಾದಲ್ಲಿ ಪೂಜಾ ಭಾಲೇಕರ್ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ನೋಡಿದರೆ ಪೂಜಾ ತಮ್ಮ ಪಾತ್ರಕ್ಕಾಗಿ ತುಂಬಾ ಶ್ರಮ ಹಾಕಿರುವುದು ಕಾಣುತ್ತದೆ. ಭಾರತ ಹಾಗೂ ಚೀನಾದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ. ಆರ್ಟ್ಸಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿರುವ ಈ ಹುಡುಗಿ ಚಿತ್ರ ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ.