ಕೆಜಿಎಫ್ ಚಿತ್ರದ ಡಬ್ಬಿಂಗ್ ಮುಗಿಸಿದ ಬಾಲಿವುಡ್ ಚೆಲುವೆ

ನಮ್ಮ ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಇಡೀ ಸಿನಿ ಜಗತ್ತು ನಮ್ಮ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಕೆಜಿಎಫ್. ಕೆಜಿಎಫ್ ಚಾಪ್ಟರ್ 1 ಸಿನಿಮಾದಿಂದ ನಮ್ಮ ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರು ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದರು. ಕೆಜಿಎಫ್ ಚಾಪ್ಟರ್ 1 ಸಿನಿಮಾ ಹಿಂದಿನ ಎಲ್ಲ ಸಿನಿಮಾಗಳ ರೆಕಾರ್ಡಗಳನ್ನು ಬ್ರೇಕ್ ಮಾಡಿತ್ತು. ಕನ್ನಡ, ತೆಲುಗು, ತಮಿಳು, ಹಿಂದಿ ಮಲಯಾಳಂ ಹೀಗೆ ಐದು ಭಾಷೆಗಳಲ್ಲಿ ರಿಲೀಸಾದ ನಮ್ಮ ಕೆಜಿಎಫ್ ಚಾಪ್ಟರ್ 1 ಸಿನಿಮಾ ಎಲ್ಲ ಭಾಷೆಗಳಲ್ಲೂ ಭರ್ಜರಿ ಯಶಸ್ಸನ್ನು ಕಂಡಿತ್ತು. ಕೆಜಿಎಫ್ ಚಾಪ್ಟರ್ 1 ಸಿನಿಮಾ ನೋಡಿದ ಸಿನಿಪ್ರೇಕ್ಷಕರು ಕೆಜಿಎಫ್ ಚಾಪ್ಟರ್ 2 ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಕೊರೋನಾ ಬಿಕ್ಕಟ್ಟು ಇಲ್ಲವಾಗಿದ್ದರೆ ಇಷ್ಟೊತ್ತಿಗಾಗಲೇ ಕೆಜಿಎಫ್ ಚಾಪ್ಟರ್ 2 ಥಿಯೇಟರ್ಗೆ ಬರಬೇಕಿತ್ತು. ನಮ್ಮ ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿರುವ ಕೆ ಜಿ ಎಫ್ ಚಾಪ್ಟರ್ 2 ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆಯನ್ನು ಮೂಡಿಸಿದ ಸಿನಿಮಾ ಆಗಿದೆ. ಯಶ್ ಅವರ ಹುಟ್ಟುಹಬ್ಬದಂದು ಡೇಂಜರ್ ಅಹೇಡ್ ಎಂಬ ಶೀರ್ಷಿಕೆಯೊಂದಿಗೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಬಿಡುಗಡೆಯಾದ ದಿನವೇ ಅತಿಹೆಚ್ಚು ಲೈಕ್ಸ್ ಮತ್ತು ವ್ಯೂಸ್ ಗಳನ್ನು ಪಡೆದು ದಾಖಲೆ ಬರೆದಿತ್ತು. ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ, ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಜೊತೆ ಖಡಕ್ ವಿಲ್ಲನ್ ಆಗಿ ಅಧೀರ ಪಾತ್ರದಾರಿ ಸಂಜಯ್ ದತ್ ಮಿಂಚಲಿದ್ದಾರೆ. ಇನ್ನು ಪ್ರಧಾನಮಂತ್ರಿಯ ಪಾತ್ರದಲ್ಲಿ ರಮಿಕಾ ಆಗಿ ಬಾಲಿವುಡ್ ನಟಿ ರವೀನಾ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಈ ಪಾತ್ರ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರಿಂದ ಸ್ಫೂರ್ತಿ ಪಡೆದಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಈ ಪಾತ್ರ ಇಂದಿರಾಗಾಂಧಿ ಇಂದ ಸ್ಪೂರ್ತಿ ಪಡೆದ ಪಾತ್ರವಲ್ಲ ಎಂದು ರವೀನಾ ಸ್ಪಷ್ಟನೆ ನೀಡಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್, ತೆಲುಗು ನಟ ರಮೇಶ್ ಸೇರಿದಂತೆ ಅತಿ ದೊಡ್ಡ ತಾರಾಬಳಗ ಈ ಚಿತ್ರಕ್ಕಿದೆ. ಕೆಲ ತಿಂಗಳ ಹಿಂದೆ ಪ್ರಶಾಂತ್ ನೀಲ್ ಅವರು ಕೆಜಿಎಫ್ ಚಾಪ್ಟರ್ 2 ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಅವರ ಡಬ್ಬಿಂಗ್, ಎಲ್ಲಾ ಭಾಷೆಗಳಲ್ಲೂ ಮುಕ್ತಾಯಗೊಂಡಿದೆ ಎಂದು ಟ್ವೀಟ್ ಮಾಡಿದ್ದರು.

ಯಶ್ ಅವರ ಡಬ್ಬಿಂಗ್ ಕೆಲಸ ಕೂಡ ಮುಕ್ತಾಯಗೊಂಡಿದ್ದು, ಹಿಂದಿಯಲ್ಲೂ ಕೂಡ ತಮ್ಮ ಪಾತ್ರಕ್ಕೆ ಅವರು ತಾವೇ ಡಬ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಬಗ್ಗೆ ಈ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಕೂಡ ಹೊಸ ಅಪ್ಡೇಟ್ ನೀಡಿದ್ದಾರೆ. ಕೆಜಿಎಫ್ ಚಾಪ್ಟರ್ 1 ನಲ್ಲಿ ರಾಕಿ ಬಾಯ್ ಹುಡುಗಿಯಾಗಿ ಮಿಂಚಿದ ಇವರು ಚಾಪ್ಟರ್ 2 ನಲ್ಲೂ ಮಿಂಚಲು ಸಖತ್ ಎಕ್ಸೈಟ್ ಆಗಿದ್ದಾರೆ. ಕೆಜಿಎಫ್ ಸಿಕ್ವೆಲ್ ನ ತಮ್ಮ ಡಬ್ಬಿಂಗ್ ಕೆಲಸವನ್ನು ಶ್ರೀನಿಧಿ ಕಂಪ್ಲೀಟ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಡಬ್ಬಿಂಗ್ ಮಾಡುತ್ತಿರುವ ಫೋಟೋ ಅಪ್ಲೋಡ್ ಮಾಡಿರುವ ಇವರು, ಈ ಚಿತ್ರಕ್ಕೆ ಹೃದಯಪೂರ್ವಕವಾಗಿ ಕೆಲಸ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಎಲ್ಲರ ಡಬ್ಬಿಂಗ್ ಕೆಲಸ ಪೂರ್ಣಗೊಳ್ಳುತ್ತಿದ್ದು ಏಪ್ರಿಲ್ 14 ರಂದು ಬಾಕ್ಸ್ ಆಫೀಸ್ ಧೂಳೆಬ್ಬಿಸಲು ರಾಕಿ ಬಾಯ್ ಸಜ್ಜಾಗಿದ್ದಾರೆ.

%d bloggers like this: