ಕೆಜಿಎಫ್ ಚಿತ್ರತಂಡದಿಂದ ಅಭಿಮಾನಿಗಳಿಗೆ ಸಿಕ್ತು ದೊಡ್ಡದಾದ ಮುನ್ಸೂಚನೆ

ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಚಾಪ್ಟರ್2 ಚಿತ್ರದ ಮ್ಯೂಸಿಕ್ ಕೆಲಸ ಕಾರ್ಯಗಳು ಆರಂಭವಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿರುವ ಪೋಸ್ಟ್ ಪ್ರೊಡಕ್ಷನ್ ಕೆಲಸದ ಜೊತೆಗೆ ಒಂದಷ್ಟು ಮ್ಯೂಸಿಕ್ ಕೆಲಸಗಳಲ್ಲಿ ನಿರತರಾಗಿರುವ ಚಿತ್ರತಂಡ ಈ ನಡುವೆ ಒಂದಷ್ಟು ಪ್ರಸಿದ್ದ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಹೌದು ಇತ್ತೀಚೆಗೆ ತಾನೇ ಕೋವಿಡ್ ಮೂರನೇ ಅಲೆಯ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಕಂಡು ಪರಿಸ್ಥಿತಿ ಕೈಮೀರಿ ಹೋಗಬಾರದು ಎಂಬ ಉದ್ದೇಶದಿಂದ ಸರ್ಕಾರ ಕೂಡ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಮಾಡಿತ್ತು. ಅಷ್ಟೇ ಅಲ್ಲದೆ ಚಿತ್ರಮಂದಿರಗಳಿಗೆ ಶೇಕಡ ಐವತ್ತರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದರಿಂದ ಚಿತ್ರರಂಗಕ್ಕೆ ಅಪಾರ ನಷ್ಟ ಎಂದು ಚಿತ್ರರಂಗ ಅಸಮಾಧಾನ ವ್ಯಕ್ತಪಡಿಸಿದೆ. ಎಲ್ಲಾ ಕ್ಷೇತ್ರಗಳಿಗೆ ಸಂಪೂರ್ಣ ವಿನಾಯಿತಿ ನೀಡಿ ಸಿನಿಮಾ ಥಿಯೇಟರ್ ಗಳಿಗೆ ಮಾತ್ರ 50% ಅಕ್ಯುಪೆನ್ಸಿ ನೀಡಿರುವುದು ಮಲತಾಯಿ ಧೋರಣೆ ಕೆಲಸ ಎಂದು ಒಂದಷ್ಟು ನಟರು ಸೋಶಿಯಲ್ ಮೀಡಿಯಾದಲ್ಲಿ ಸರ್ಕಾರದ ನಿಲುವಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದರು‌. ಇತ್ತ ಬಿಡುಗಡೆಗೆ ಸಿದ್ದವಾಗಿರುವ ಸಿನಿಮಾಗಳು ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿ ಚಿತ್ರ ಬಿಡುಗಡಗೆ ಸಕಲ ಸಿದ್ದತೆ ಮಾಡಿಕೊಂಡಿವೆ. ಅವುಗಳ ಪೈಕಿ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿರುವ ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ ಸಿನಿಮಾ ಕೂಡ ಒಂದಾಗಿದೆ‌.

ಈ ಕೆಜಿಎಫ್ ಚಾಪ್ಟರ್2 ಸಿನಿಮಾವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವದ ಸಿನಿ ರಸಿಕರೇ ಕಾತುರದಿಂದ ಕಾಯುತ್ತಿದ್ದಾರೆ. ಇದೇ ಏಪ್ರಿಲ್14 ರಂದು ಈ ಸಿನಿಮಾ ವರ್ಲ್ಡ್ ವೈಡ್ ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ‌. ಅದರ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿರುವ ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರ್ ಅವರ ಸ್ಟೂಡಿಯೋದಲ್ಲಿ ಮ್ಯೂಸಿಕ್ ಕೆಲಸ ಕಾರ್ಯಗಳು ಕೂಡ ಭರದಿಂದ ಸಾಗುತ್ತಿದ್ದು, ನಟ ಯಶ್ ಮತ್ತು ನಿರ್ಮಾಪಕರು ಸೇರಿದಂತೆ ಇಡೀ ಚಿತ್ರತಂಡ ಆನೆಗುಡ್ಡೆ ದೇವಸ್ಥಾನ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇದರ ನಡುವೆ ಬಿಡುವು ಮಾಡಿಕೊಂಡು ನಟ ಯಶ್ ಮತ್ತು ಅವರ ಸ್ನೇಹ ಬಳಗ ಕೆಜಿಎಫ್ ಚಾಪ್ಟರ್2 ಚಿತ್ರದ ರಿಲೀಸ್ ಟೆನ್ಶನ್ ನಲ್ಲಿಯೂ ಕೂಡ ಜಾಲಿಯಾಗಿ ಕ್ರಿಕೆಟ್ ಆಡುವ ಮೂಲಕ ಜಾಲಿ ಮೂಡ್ ನಲ್ಲಿರುವ ಒಂದಷ್ಟು ವೀಡಿಯೋ ತುಣುಕುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

%d bloggers like this: