ಪಾಕಿಸ್ತಾನದ ಸ್ಟಾರ್ ಕ್ರಿಕೆಟ್ ಆಟಗಾರನ ದಾಖಲೆ ಮುರಿದ ರೋಹಿತ್ ಶರ್ಮಾ

ಟಿ-ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಭಾರತಕ್ಕೆ 73 ರನ್ ಗಳ ಭರ್ಜರಿ ಜಯ. ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ನಿರ್ಮಾಣ. ನ್ಯೂಜಿಲೆಂಡ್ ವಿರುದ್ದ ನಡೆದ ಟಿ-ಟ್ವೆಂಟಿ ಸರಣಿ ಅಂತಿಮ ಪಂದ್ಯದಲ್ಲಿ ಭಾರತ ಇಪ್ಪತ್ತು ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 184 ರನ್ ಕಲೆ ಹಾಕಿತ್ತು. ನಾಯಕ ರೋಹೀತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ನ್ಯೂಜಿಲೆಂಡ್ 17.2 ಓವರ್ ಗಳಲ್ಲಿ 111 ರನ್ ಗಳನ್ನು ಕಲೆ ಹಾಕುವುದಕ್ಕೆ ಮಾತ್ರ ಸಮಾಧಾನ ಪಟ್ಟಿಕೊಂಡು ಭಾರತದ ಮುಂದೆ ಸೋಲಿಗೆ ಶರಣಾಗಬೇಕಾಯಿತು. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಂತಹ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

31 ಎಸೆತಗಳಲ್ಲಿ ಐದು ಫೋರ್ ಮತ್ತು ಮೂರು ಸಿಕ್ಸರ್ ಸಿಡಿಸಿ ಒಟ್ಟು 56 ರನ್ ಗಳನ್ನ ಕಲೆ ಹಾಕುವ ಮೂಲಕ ಭಾರತ ತಂಡ ಗೆಲುವಿನ ನಗೆ ಬೀರಲು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. 180.65 ಸ್ಟ್ರೈಕ್ ರೇಟ್ ಹೊಂದಿದ ರೋಹಿತ್ ಶರ್ಮಾ ಅವರ ಆಟದ ವೈಖರಿ ಮೈದಾನದಲ್ಲಿ ಅವರ ಅಭಿಮಾನಿಗಳಿಗೆ ಸಖತ್ ಎಂಜಾಯ್ ಮಾಡುವಂತಾಗುತ್ತಿತ್ತು. ರೋಹಿತ್ ಶರ್ಮಾ (56) ಮತ್ತು ಇಶಾನ್ ಕಿಶನ್ (29) ಈ ಜೋಡಿಯ ಬಿರುಸಿನ ಆಟದ ಜೊತೆಗೆ ಕೊನೆಯಲ್ಲಿ ಅಕ್ಷರ್ ಪಟೇಲ್ ಮತ್ತು ಹರ್ಷಲ್ ಪಟೇಲ್ ಅವರ ಬೌಲಿಂಗ್ ದಾಳಿಯಿಂದಾಗಿ ಕಿವೀಸ್ ತಂಡವನ್ನು ಮಣಿಸಿ ಭಾರತ ಕ್ಲೀನ್ ಸ್ವೀಪ್ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ನಾಯಕ ರೋಹಿತ್ ಶರ್ಮ ಈ ಪಂದ್ಯದ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಟಿ – ಟ್ವೆಂಟಿ ಕ್ರಿಕೆಟ್ ನಲ್ಲಿ ಭಾರತ ತಂಡದ ಪರವಾಗಿ ಅತಿ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ರೋಹಿತ್ ಶರ್ಮಾ ಅವರದ್ದಾಗಿದೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಪಾಕಿಸ್ತಾನದ ಮಾಜಿ ಆಟಗಾರರಾದ ಶಾಹಿದ್ ಅಫ್ರಿದಿ ಅವರ ವರ್ಲ್ಡ್ ರೆಕಾರ್ಡ್ ಅನ್ನು ಬ್ರೇಕ್ ಮಾಡಿದ್ದಾರೆ.

ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಅತಿ ವೇಗವಾಗಿ ಅಂದರೆ ಕೇವಲ 404 ಇನ್ನಿಂಗ್ಸ್ ನಲ್ಲಿ ರೋಹಿತ್ ಶರ್ಮಾ 450 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಅಫ್ರಿದಿ ಅವರ ಹೆಸರಿನಲ್ಲಿದ್ದ ದಾಖಲೆ ಇದೀಗ ರೋಹಿತ್ ಶರ್ಮಾ ಅವರ ಪಾಲಾಗಿದೆ. ಇದಕ್ಕೂ ಮುನ್ನ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಅವರು 487 ಇನ್ನಿಂಗ್ಸ್ ಗಳಲ್ಲಿ 450 ಸಿಕ್ಸ್ ಸಿಡಿಸುವುದರ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದ್ದರು.

%d bloggers like this: