ಚಂದನವನದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಮಿಂಚಲಿದ್ದಾರೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಪರಿಣಾಮ ನಿರಂತರವಾಗಿ ಏರಿಕೆ ಆಗಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ದಿನಗಳನ್ನ ಸಂಪೂರ್ಣವಾಗಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಮಾಡಿತು. ಇದರಿಂದ ಹೋಟೆಲ್ ಉದ್ಯಮ , ಪಬ್ ರೆಸ್ಟೋರೆಂಟ್ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಹೊಡೆತ ಬಿತ್ತು. ಇದಕ್ಕೆ ಮನರಂಜನಾ ಕ್ಷೇತ್ರ ಚಿತ್ರರಂಗಕ್ಕೂ ಕೂಡ ಅಪಾರ ನಷ್ಟವನ್ನುಂಟು ಮಾಡಿತು. ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ ಐವತ್ತರಷ್ಟು ಸೀಮಿತ ಆಸನಕ್ಕೆ ಮಾತ್ರ ಅವಕಾಶ ನೀಡಿ ಕಠಿಣ ಮಾರ್ಗಸೂಚಿ ಜಾರಿ ಮಾಡಿತ್ತು.

ಇದೀಗ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶರವೇಗದಲ್ಲಿ ಕಡಿಮೆಯಾದ ಹಿನ್ನೆಲೆ ಸರ್ಕಾರ ಎಲ್ಲಾ ನೈಟ್ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂವನ್ನೂ ಹಿಂಪಡೆದಿದೆ. ಆದರೆ ಸಿನಿಮಾ ಥಿಯೇಟರ್ ಗಳಿಗಿರುವ 50 % ಆಕ್ಯುಪೆನ್ಸಿ ನಿಯಮವನ್ನು ಮಾತ್ರ ಸಡಿಲಗೊಳಿಸಿಲ್ಲ. ಇದರಿಂದ ಸರ್ಕಾರದ ನಿರ್ಧಾರದ ವಿರುದ್ದ ಚಿತ್ರರಂಗ ಅಸಮಾಧಾನ ವ್ಯಕ್ತಪಡಿಸಿದೆ. ಈಗಾಗಲೇ ಬಿಡುಗಡೆಗೆ ಸಿದ್ದವಾಗಿದ್ದಂತಹ ಬಿಗ್ ಬಜೆಟ್ ನ ಎಲ್ಲಾ ಸಿನಿಮಾಗಳು ತನ್ನ ರಿಲೀಸ್ ಡೇಟ್ ಅನ್ನು ಮುಂದೂಡಲ್ಪಟ್ಟಿವೆ. ಇದರ ನಡುವೆ ಸ್ಯಾಂಡಲ್ ವುಡ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ವೀರಂ ಸಿನಿಮಾ ಮಾತ್ರ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ.



ಹೌದು ಶಶಿಧರ್ ಸ್ಟೂಡಿಯೋ ನಿರ್ಮಾಣದಡಿಯಲ್ಲಿ ಶಶಿಧರ ಅವರು ನಿರ್ಮಾಣ ಮಾಡಿರುವ ಈ ವೀರಂ ಸಿನಿಮಾ ಮೇ 6 ರಂದು ರಾಜ್ಯದ್ಯಂತ ಅದ್ದೂರಿಯಾಗಿ ಥಿಯೇಟರ್ ಗಳಿಗೆ ಲಗ್ಗೆ ಇಡಲಿದೆಯಂತೆ. ಈ ವೀರಂ ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರು ವಿಷ್ಣು ವರ್ಧನ್ ಅವರ ಅಪ್ಪಟ ಅಭಿಮಾನಿಯಾಗಿರಲಿದ್ದಾರಂತೆ. ಈಗಾಗಾಲೇ ನಾಯಕ ನಟ ಪ್ರಜ್ವಲ್ ದೇವರಾಜ್ ಅವರ ಕೈ ಮೇಲೆ ವಿಷ್ಣು ಅವರ ಟ್ಯಾಟೋ ಇರುವ ಪೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ.



ಇನ್ನು ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಅವರಿಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಇನ್ನು ವೀರಂ ಸಿನಿಮಾಗೆ ಅನೂಪ್ ಸೀಳಿನ್ ರಾಗ ಸಂಯೋಜನೆ ಮಾಡಿದ್ದು, ಲವಿತ್ ಛಾಯಾಗ್ರಹಣದ ಕೆಲಸ ಮಾಡಿದ್ದಾರೆ. ಇನ್ನು ಪ್ರಮುಖ ಪಾತ್ರಗಳಲ್ಲಿ ನಟಿ ಶೃತಿ, ಶಿಷ್ಯ ಸಿನಿಮಾ ಖ್ಯಾತಿಯ ನಟ ದೀಪಕ್, ಶ್ರೀನಗರ ಕಿಟ್ಟಿ, ಅಚ್ಯುತ್ ಕುಮಾರ್ ಬಣ್ಣ ಹಚ್ಚಿದ್ದಾರೆ. ಒಟ್ಟಾರೆಯಾಗಿ ಸ್ಯಾಂಡಲ್ ವುಡ್ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ವೀರಂ ಸಿನಿಮಾ ಮೇ 6 ರಂದು ನಾಡಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.