ಸಂತಸದ ವಿಷಯ ಹಂಚಿಕೊಂಡ ರಕ್ಷಿತ್ ಶೆಟ್ಟಿ ಅವರು, ಸಪ್ತಸಾಗರದಾಚೆ ಎಲ್ಲೋ ಮೊದಲಾರ್ಧ ಯಶಸ್ವಿ

ನಟ ರಕ್ಷಿತ್ ಶೆಟ್ಟಿ ಶ್ರೀಮನ್ನಾರಾಯಣ ಚಿತ್ರದ ನಂತರ 777ಚಾರ್ಲಿ, ರಿಚರ್ಡ್ ಆಂಟೋನಿ ಮತ್ತು ಗೋಧಿಬಣ್ಣ ಸಾಧಾರಣ ಮೈಕಟ್ಟು ಸಿನಿಮಾ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗೆ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುವುದರ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಕೂಡ ಹೊತ್ತಿದ್ದಾರೆ ರಕ್ಷಿತ್ ಶೆಟ್ಟಿ. ಕೋವಿಡ್ ಮೂರನೇ ಅಲೆಯ ಹಿನ್ನೆಲೆಯಲ್ಲಿ ಇವರ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಚಿತ್ರೀಕರಣಕ್ಕೆ ಕೊಂಚ ಅಡಚಣೆ ಉಂಟಾಗಿದೆ. ಆದರು ಕೂಡ ಇದೆಲ್ಲರದ ನಡುವೆ ಈ ಚಿತ್ರದ ಮೊದಲರ್ಧ ಭಾಗದ ಚೀತ್ರೀಕರಣ ಮುಗಿಸಿಕೊಂಡಿದೆಯಂತೆ ಚಿತ್ರತಂಡ.

ಈ ವಿಚಾರವನ್ನು ಸ್ವತಃ ರಕ್ಷಿತ್ ಶೆಟ್ಟಿ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮನು ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಥಾ ನಾಯಕಿ ಪ್ರಿಯಾ ಪಾತ್ರದಲ್ಲಿ ರಕ್ಷಿತ್ ಶೆಟ್ಟಿಗೆ ಜೋಡಿಯಾಗಿ ನಟಿ ರುಕ್ಮಿಣಿ ವಸಂತ್ ಅಭಿನಯಿಸುತ್ತಿದ್ದಾರೆ. ಇನ್ನು ಈ ಚಿತ್ರದ ಪಾತ್ರಕ್ಕಾಗಿ ರಕ್ಷಿತ್ ಶೆಟ್ಟಿ ತಮ್ಮ ದೇಹದ ತೂಕವನ್ನು ಇಳಿಸಿಕೊಂಡಿದ್ದರಂತೆ. ಏಕೆಂದರೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಮೊದಲರ್ಧದಲ್ಲಿ ಸಣ್ಣ ವಯಸ್ಸಿನ ಹುಡುಗನಾಗಿ ಮತ್ತು ದ್ವಿತೀಯಾರ್ಧದಲ್ಲಿ ಕೊಂಚ ಪ್ರಬುದ್ದನಾಗಿ ಹೀಗೆ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಈ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ದಶಕದ ಹಿಂದಿನ ಪ್ರೇಮ ಕಥೆಯಿದ್ದು ಭಾವನಾತ್ಮಕ ಪಾತ್ರದಲ್ಲಿ ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಪ್ರೇಮ ಕಥಾ ಚಿತ್ರಕ್ಕೆ ಚರಣ್ ರಾಜ್ ರಾಗ ಸಂಯೋಜನೆ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ರಕ್ಷಿತ್ ಶೆಟ್ಟಿ ಅವರು ತಿಳಿಸಿರುವ ಪ್ರಕಾರ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಚಿತ್ರೀಕರಣ ಮೊದಲರ್ಧ ಭಾಗ ಸಂಪೂರ್ಣವಾಗಿದ್ದು, ಉಳಿದ ಅರ್ಧ ಭಾಗವನ್ನು ಈ ತಿಂಗಳ ಅಂತ್ಯಕ್ಕೆ ಯೋಜನೆ ಹಾಕಿಕೊಂಡಿದ್ದಾರಂತೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರ ಮುಂದಿನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ.

%d bloggers like this: