ತಮಿಳುನಾಡಿನ ಗೆಳತಿಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಆರ್ಸಿಬಿ ತಂಡದ ಸ್ಟಾರ್ ಆಟಗಾರ

ಆಸ್ಟ್ರೇಲಿಯಾ ಮೂಲದ ಸ್ಟಾರ್ ಬ್ಯಾಟ್ಸಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಕಳೆದ ಬಾರಿಯ ಐಪಿಎಲ್ ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಹೃದಯ ಗೆದ್ದಿದ್ದಾರೆ. ಇತ್ತೀಚಿಗೆ ನಡೆದ ಐಪಿಎಲ್ ಹರಾಜಿನಲ್ಲೂ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಸೆಲೆಕ್ಟ್ ಆಗಿದ್ದು, ಈ ಬಾರಿಯೂ ಇವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಲಿದ್ದಾರೆ. ನಮ್ಮ ದೇಶದವರಲ್ಲದಿದ್ದರೂ ಹಲವು ಕ್ರಿಕೆಟರ್ ಗಳು ನಮ್ಮ ಭಾರತೀಯ ಸಂಸ್ಕೃತಿಗೆ ಮಾರು ಹೋಗಿದ್ದಾರೆ. ಎಷ್ಟೋ ಜನ ವಿದೇಶಿಯರು ನಮ್ಮ ಭಾರತೀಯ ಸಂಪ್ರದಾಯವನ್ನು ಅನುಸರಿಸುತ್ತಾರೆ. ನಮ್ಮ ಆಚಾರ ವಿಚಾರಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಹಲವಾರು ವಿದೇಶಿ ಸೆಲೆಬ್ರಿಟಿಗಳು ಭಾರತೀಯ ಮೂಲದವರನ್ನು ವಿವಾಹವಾಗಿರುವ ಉದಾಹರಣೆಗಳಿವೆ.

ಹಾಗೆಯೇ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಭಾರತೀಯ ಮೂಲದವರನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಹೌದು ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸಮನ್ ಗ್ಲೆನ್ ಮ್ಯಾಕ್ಸ್‌ವೆಲ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಭಾರತೀಯ ಮೂಲದ ವಿನಿ ರಾಮನ್ ಎಂಬುವವರನ್ನು ವಿವಾಹವಾಗಲಿದ್ದಾರೆ. ತಮಿಳು ಮೂಲದವರಾದ ವಿನಿ ರಾಮನ್ ಅವರ ಪೋಷಕರು ಹಲವು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಯೂರಿದ್ದಾರೆ. ಹೀಗಾಗಿ ವಿನಿ ರಾಮನ್ ಕೂಡ ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆದವರು.

ಪ್ರಸ್ತುತ ವೃತ್ತಿಪರ ಫಾರ್ಮಸಿಸೆಟ್ ಆಗಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮೊದಲು ಸ್ನೇಹಿತರಾಗಿದ್ದ ಇವರಿಬ್ಬರು ಹಲವು ದಿನಗಳಿಂದ ಡೇಟಿಂಗ್ ನಲ್ಲಿ ಇದ್ದರು. ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಒತ್ತಡದಲ್ಲಿದ್ದ ಸಂದರ್ಭದಲ್ಲಿ ವಿನಿ ರಾಮನ್ ಅವರು ಆಸರೆಯಾಗಿ ನಿಂತಿದ್ದರು. ಈ ಸಂದರ್ಭದಲ್ಲಿಯೇ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿದೆ. 2020 ರಲ್ಲೇ ಇವರಿಬ್ಬರ ನಿಶ್ಚಿತಾರ್ಥ ನೆರವೇರಿತ್ತು. ಇದೀಗ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ವಿಶೇಷವೆಂದರೆ ಇವರ ವಿವಾಹ ಸಂಪೂರ್ಣವಾಗಿ ಭಾರತೀಯ ಸಂಪ್ರದಾಯದ ಪ್ರಕಾರ ಮೆಲ್ಬೋರ್ನ್ ನಲ್ಲಿ ನಡೆಯಲಿದೆ.

ಇನ್ನೊಂದು ವಿಶೇಷವೆಂದರೆ ಇವರಿಬ್ಬರ ವಿವಾಹದ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಸಂಪ್ರದಾಯದಂತೆ ತಮಿಳಿನಲ್ಲಿ ಮುದ್ರಿಸಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರಿಬ್ಬರ ಮದುವೆ ಆಮಂತ್ರಣ ಪತ್ರಿಕೆಯನ್ನು ತಮಿಳಿನ ನಟಿ ಕಸ್ತೂರಿ ಶಂಕರ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ತಮಿಳಿನಲ್ಲಿ ಆಹ್ವಾನ ಪತ್ರಿಕೆಯನ್ನು ಮುದ್ರಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ. ಒಟ್ಟಾರೆಯಾಗಿ ಕ್ರೀಡೆಯಲ್ಲಿ ಭಾರತದ ಎದುರಾಳಿ ಆದರೂ ಸಂಬಂಧದಲ್ಲಿ ಗ್ಲೇನ್ ಮ್ಯಾಕ್ಸ್ವೆಲ್ ಅವರು ಭಾರತದ ಅಳಿಯನಾಗಿದ್ದಾರೆ.

%d bloggers like this: