ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಮಂತ್ರಿ ದೇವೇಗೌಡರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಗ. ಕೆಲವು ವರ್ಷಗಳ ಹಿಂದೆ ಜಾಗ್ವಾರ್ ಎಂಬ ಹಿಟ್ ಚಿತ್ರದ ಮೂಲಕ ನಿಖಿಲ್ ಅವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಕುರುಕ್ಷೇತ್ರ ಸೀತಾರಾಮಕಲ್ಯಾಣ ಎಂಬ ಸತತ ಜನರ ಮೆಚ್ಚುಗೆಗೆ ಪಾತ್ರವಾದ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡರು. ಹೋದವರ್ಷ ನಡೆದ 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಕೂಡ ಪ್ರತಿನಿಧಿಸಿ ರಾಜಕೀಯ ಅಖಾಡಕ್ಕೆ ಧುಮುಕಿ ಬಂದರು. ಆದರೆ ಈಗ ಅವರು ತಮ್ಮ ತಂದೆಯವರು ನಡೆದ ಹಾದಿಯಲ್ಲಿ ಮತ್ತೊಂದು ಕೆಲಸಕ್ಕೆ ಸಜ್ಜಾಗಿದ್ದಾರೆ.
ಎಚ್ ಡಿ ಕುಮಾರಸ್ವಾಮಿಯವರು ರಾಜಕೀಯಕ್ಕೆ ಬರುವ ಮುನ್ನ ಕನ್ನಡದ ಒಳ್ಳೆಯ ನಿರ್ಮಾಪಕರಲ್ಲಿ ಒಬ್ಬರಾಗಿದ್ದರು. ಚೆನ್ನಾಂಬಿಕಾ ಫಿಲ್ಮ್ ಬ್ಯಾನರ್ ಎಂಬ ಸಂಸ್ಥೆಯ ಮೂಲಕ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದರು. ಈಗ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಅಂತಹದೇ ಒಂದು ಪ್ರಯತ್ನಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ದರ್ಶನ್, ಸುದೀಪ್, ಪುನೀತ್ ರಾಜಕುಮಾರ್ ಅವರು ತಮ್ಮ ಅಭಿನಯದ ಜೊತೆಗೆ ಹೊಸಬರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ತಮ್ಮದೇ ಬ್ಯಾನರ್ ಅಡಿಯಲ್ಲಿ ಚಿತ್ರನಿರ್ಮಾಣ ಕೂಡ ಮಾಡುತ್ತಿದ್ದಾರೆ. ಈಗ ನಿಖಿಲ್ ಅವರು ಸಹ ಎನ್ ಕೆ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಬ್ಯಾನರ್ ನಲ್ಲಿ ಸಂಗೀತ್ ಎಂಬ ಸಿನಿಮಾ ಮೊದಲಿಗೆ ನಿರ್ಮಾಣವಾಗಲಿದೆ. ಈ ಚಿತ್ರವನ್ನು ಹಂಬಲ್ ಪೊಲಿಟಿಷಿಯನ್ ನಾಗರಾಜ್ ಎಂಬ ಚಿತ್ರ ನಿರ್ದೇಶನ ಮಾಡಿದ ಸಾದ್ ಖಾನ್ ನಿರ್ದೇಶಿಸುತ್ತಿದ್ದಾರೆ.