ಟ್ವಿಟ್ಟರ್ ಇಂದ ಡೊನಾಲ್ಡ್ ಟ್ರಂಪ್ ಮಾಯ, ನರೇಂದ್ರ ಮೋದಿ ಅವರಿಗೆ ಸಿಕ್ತು ಮೊದಲ ಸ್ಥಾನ

ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದರಿಂದ ಪ್ರತಿಷ್ಠಿತ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಿಂದ ನಿಷೇಧ ಮಾಡಲಾಗಿದೆ. ಡೊನಾಲ್ಡ್ ಟ್ರಂಪ್ ಮೊನ್ನೆಯವರೆಗೆ ಟ್ವಿಟ್ಟರ್ ಖಾತೆಯಲ್ಲಿ 88.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದರು ಆದರೆ ಟ್ರಂಪ್ ಅವರ ಕೆಲವು ಪ್ರಚೋದನಕಾರಿ ಹೇಳಿಕೆ ಮತ್ತು ಅವರ ಅನುಚಿತ ವರ್ತನೆಯಿಂದಾಗಿ ಏಕಾಏಕಿ ಅವರ ಅನುಯಾಯಿಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಅಮೇರಿಕಾದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ತಮ್ಮ ಬೆಂಬಲಿಗರಿಗೆ ಪ್ರಚೋದಿಸಿ ಸಂಸಂತ್ ಮೇಲೆ ದಾಳಿಯಾಗಿತ್ತು, ಇದರಿಂದ ಡೊನೋಲ್ಡ್ ಟ್ರಂಪ್ ಐದು ಜನರ ಸಾವಿಗೆ ಕಾರಣರಾಗಿದ್ದರು. ಇಂತಹ ಅನೇಕ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಆಗಾಗ ಸುದ್ದಿಯಲ್ಲಿರುತ್ತಿದ್ದ ಟ್ರಂಪ್ ಅವರನ್ನು ಟ್ವಿಟ್ಟರ್ ಸಂಸ್ಥೆ ನೆನ್ನೆ ಶಾಶ್ವತವಾಗಿ ಟ್ವಿಟ್ಟರ್ ನಿಂದ ನಿರ್ಭಂದಿಸಿದೆ. ಇದರಿಂದಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು, ಟ್ವಿಟ್ಟರ್ ನಲ್ಲಿ ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ಪ್ರಮುಖ ವ್ಯಕ್ತಿಯಾಗಿದ್ದು ಟ್ವಿಟ್ಟರ್ ನಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಪ್ರಧಾನಿ ಮೋದಿಯವರು ಸೋಶಿಯಲ್ ಮೀಡಿಯಾದಲ್ಲಿ ದೇಶದಲ್ಲಿ ನಡೆಯುತ್ತಿರುವ ಹೊಸ ಹೊಸ ಬೆಳೆವಣಿಗೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ ಹೆಚ್ಚು ಟ್ವಿಟ್ಟರ್ ನಲ್ಲಿ ಸಕ್ರೀಯರಾಗಿದ್ದಾರೆ. ಸದ್ಯದ ಮಟ್ಟಿಗೆ ಪ್ರಧಾನಿ ಮೋದಿ ಅವರು ಟ್ವಿಟ್ಟರ್ ನಲ್ಲಿ 64.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ಅಮೇರಿಕಾದ ನಿಯೋಜಿತ ಅಧ್ಯಕ್ಷರಾಗಿರುವ ಜೋಬೈಡನ್ 23.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರೀವಾಲ್ ಅವರು 21.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 24.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ಅಮೇರಿಕಾದಲ್ಲಿ ರಾಜಕೀಯ ವ್ಯಕ್ತಿಗಳನ್ನು ಹೊರತು ಪಡಿಸಿದರೆ ಮಾಜಿ ಅಧ್ಯಕ್ಷರಾಗಿರುವ ಬರಾಕ್ ಒಬಾಮ ಅವರು ಟ್ವಿಟ್ಟರ್ ನಲ್ಲಿ ಬರೋಬ್ಬರಿ 127.9 ಮಿಲಿಯನ್ ಅನುಯಾಯಿಗಳನ್ನು ಹೊಂದುವುದರ ಮೂಲಕ ಅಗ್ರಸ್ಥಾನದಲ್ಲಿ ಇದ್ದಾರೆ.

%d bloggers like this: