ಉತ್ತರ ಭಾರತದಲ್ಲಿ ಮತ್ತೆ ಗೆದ್ದು ಬೀಗಿದ ಕೆಜಿಎಫ್ ಚಾಪ್ಟರ್2 ಚಿತ್ರ

ಭಾರತೀಯ ಚಿತ್ರರಂಗದಲ್ಲಿ ಕನ್ನಡ ಸಿನಿಮಾಗಳಿಗೆ ಮಹತ್ವ ದೊರೆಯುವಂತೆ ಮಾಡಿದ ಚಿತ್ರ ಕೆಜಿಎಫ್, ಇದೀಗ ಈ ಚಿತ್ರ ಬಾಲಿವುಡ್ ಸ್ಟಾರ್ ನಟರ ಚಿತ್ರಗಳನ್ನು ಕೂಡ ಸೈಡ್ ಹೊಡಿದಿದೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಬಿಡುಗಡೆಗೊಂಡು ಯುಟ್ಯುಬ್ ನಲ್ಲಿ 150 ಮಿಲಿಯನ್ ಗಿಂತ ಹೆಚ್ಚು ವೀಕ್ಷಣೆ ಪಡೆದು ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ. ಪ್ರಶಾಂತ್ ನೀಲ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ರಾಕಿಂಗ್ ಸ್ಟಾರ್ ಯಶ್ ಅವರನ್ನು ಯುನಿವರ್ಸಲ್ ನಟನಾಗಿ ಮಾಡಿದೆ. ಇನ್ನು ಹಿಂದಿಯಲ್ಲಿ ಬಾಲಿವುಡ್ ಸ್ಟಾರ್ ನಟರ ಚಿತ್ರಗಳ ಟೀಸರ್ ಟ್ರೇಲರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿವೆ. ಅಜಯ್ ದೇವಗನ್ ನಟನೆಯ ಗೋಲ್ ಮಾಲ್ 5 ಚಿತ್ರದ ಟ್ರೇಲರ್ ರಿಲೀಸ್ ಆಗಿ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ ಹುಟ್ಟಿಸಿದೆ.

ಈ ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದು, ಅರ್ಷದ್ ಮರ್ಸಿ, ಕುನಾಲ್ ಕೀಮಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ormax ಎಂಬ ಮಾಧ್ಯಮವೊಂದು ನಿನ್ನೆ ಹೊಸ ಸಮೀಕ್ಷೆಯೊಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಹಿಂದಿಯಲ್ಲಿ ಬಹು ನಿರೀಕ್ಷಿತ ಹಾಗು ಜನರು ಹೆಚ್ಚು ಕಾಯುತ್ತಿರುವ ಚಿತ್ರಗಳ ಪಟ್ಟಿಯಲ್ಲಿ ಕೆಜಿಎಫ್ ಎರಡನೇ ಚಾಪ್ಟರ್ ಮೊದಲ ಸ್ಥಾನ ಗಳಿಸಿದ್ದು, ಬಾಲಿವುಡ್ ದೊಡ್ಡ ದೊಡ್ಡ ನಟರ ಚಿತ್ರಗಳನ್ನೇ ಹಿಂದೆ ಹಾಕಿ ಗೆದ್ದಿದೆ. ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರ ಜೀವನಾಧರಿತ ಚಿತ್ರವಾದ 83 ಚಿತ್ರದ ಟೀಸರ್ ಮತ್ತು ಟ್ರೇಲರ್ ಬಿಡುಗಡೆಗೊಂಡು, ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಹುಟ್ಟಿಸಿದೆ.

ಕಪಿಲ್ ದೇವ್ ಅವರ ಪಾತ್ರದಲ್ಲಿ ರಣ್ವೀರ್ ಸಿಂಗ್ ನಟಿಸುತ್ತಿದ್ದಾರೆ, ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ನಟಿಸುವುದರ ಬಂಡವಾಳವನ್ನು ಕೂಡ ಹಾಕಿದ್ದಾರೆ. ಕಬೀರ್ ಖಾನ್ ನಿರ್ದೇಶನ ಮಾಡುತ್ತಿರುವ ಈ 83 ಚಿತ್ರ ಬಾಲಿವುಡ್ ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ. ಇನ್ನು ರಣಬೀರ್ ಕಪೂರ್ ಅಭಿನಯದ ಬ್ರಹ್ಮಾಸ್ತ್ರ ಚಿತ್ರವೂ ಕೂಡ ಕುತೂಹಲ ಮೂಡಿಸಿದೆ. ಬ್ರಹ್ಮಾಸ್ತ್ರ ಸಿನಿಮಾ ಆಕ್ಷನ್ ಓರಿಯೆಂಟೆಡ್ ಚಿತ್ರವಾಗಿದ್ದು, ಇದರಲ್ಲಿ ತೆಲುಗಿನ ನಾಗರ್ಜುನ ಅಕ್ಕಿನೇನಿ, ಅಮಿತಾಬ್ ಬಚ್ಚನ್, ಡಿಂಪಲ್ ಕಪಾಡಿಯಾ, ದಿವ್ಯಾಂದ ಶರ್ಮಾ ತಾರಾಗಣದ ಜೊತೆಗೆ ನಾಯಕಿಯಾಗಿ ಆಲಿಯಾ ಭಟ್ ಹೀಗೆ ಭಾರತೀಯ ಚಿತ್ರರಂಗದ ದಿಗ್ಗಜ ನಟರು ಈ ಬ್ರಹ್ಮಾಸ್ತ್ರ ಚಿತ್ರದಲ್ಲಿ ನಟಿಸಿದ್ದಾರೆ.

ಕರಣ್ ಜೋಹರ್ ಮತ್ತು ರಣ್ ಬೀರ್ ಕಪೂರ್ ಜೊತೆಗೂಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ನಿರ್ದೇಶಕ ರಾಜಮೌಳಿ ನಿರ್ದೇಶನವಿರುವ ಆರ್.ಆರ್.ಆರ್ ಚಿತ್ರದ ಟೀಸರ್ ನಲ್ಲಿ ಜ್ಯುನಿಯರ್ ಎನ್.ಟಿ.ಆರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಜ್ಯುನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಮೊಟ್ಟ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದು, ನಾಯಕಿಯಾಗಿ ಆಲಿಯಾಭಟ್ ನಟಿಸಿದ್ದಾರೆ. ಈ ಚಿತ್ರದ ಬಜೆಟ್ ಬರೋಬ್ಬರಿ 350 ರಿಂದ 400 ಕೋಟಿ ಎಂದು ತಿಳಿದು ಬಂದಿದೆ. ಒಟ್ಟಾರೆಯಾಗಿ ಈ ಐದು ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷಿತ ಚಿತ್ರಗಳಾಗಿದ್ದು, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್2 ಚಿತ್ರ ಮೊದಲ ಸಾಲಿನಲ್ಲಿದೆ, ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

%d bloggers like this: