ವಿಶೇಷ ದಾಖಲೆ ಬರೆದ ಭಾರತದ ಇಬ್ಬರು ಹೆಸರಾಂತ ಆಟಗಾರರು

ಸೌತ್ ಆಫ್ರಿಕಾ ವಿರುದ್ದ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಗೆಲುವನ್ನು ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ ಟೀಮ್ ಇಂಡಿಯಾ ಆಟಗಾರರು. ಹೌದು ಸೆಂಚುರಿಯನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಭಾರತ ತಂಡ ಹಣಾಹಣೆಯಾಗಿತ್ತು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ದ ಭಾರತ ತಂಡ 113 ರನ್ ಗಳ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಗೆಲುವಿನ ಮುಖಾಂತರ ಟೆಸ್ಟ್ ಸರಣಿ ಪಂದ್ಯದಲ್ಲಿ ಭಾರತ ತಂಡ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ‌ . ಈ ಬಾಕ್ಸಿಂಗ್ ಡೇ ಪಂದ್ಯದಲ್ಲಿ ಭಾರತ ತಂಡದ ಪರ ಮೊಹಮ್ಮದ್ ಶಮಿ ಮತ್ತು ರಿಷಭ್ ಪಂತ್ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.

ಭಾರತದ ಪರ ಮೊಹಮ್ಮದ್ ಶಮಿ ಈ ಟೆಸ್ಟ್ ಕ್ರಿಕೆಟ್ ನಲ್ಲಿ ಇನ್ನೂರು ವಿಕೆಟ್ ಪಡೆದು ದಾಖಲೆ ಮಾಡಿದ್ದಾರೆ. ಮೊಹಮ್ಮದ್ ಶಮಿ ದಕ್ಷಿಣ ಆಫ್ರಿಕಾ ವಿರುದ್ದ ಮೊದಲ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದಿದ್ದರು. ಈ ಮುಖಾಂತರ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಇನ್ನೂರು ವಿಕೆಟ್ ಪಡೆದ ಭಾರತದ ಹನ್ನೋಂದನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಅದೇ ರೀತಿಯಾಗಿ ರಿಷಭ್ ಪಂತ್ ಕೂಡ ವಿಶಿಷ್ಟ ದಾಖಲೆಯೊಂದನ್ನ ಮಾಡಿದ್ದಾರೆ. ಅತೀ ವೇಗವಾಗಿ ವಿಕೆಟ್ ಕೀಪಿಂಗ್ ನಲ್ಲಿ ನೂರು ವಿಕೆಟ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಭಾರತ ತಂಡ ಸೌತ್ ಆಫ್ರಿಕಾ ವಿರುದ್ದ ಈ ಟೆಸ್ಟ್ ಪಂದ್ಯದಲ್ಲಿ ರೋಚಕ ಗೆಲುವು ಪಡೆಯುವಲ್ಲಿ ಈ ಇಬ್ಬರು ಆಟಗಾರರು ಪ್ರಮುಖ ಪಾತ್ರವಹಿಸಿದ್ದಾರೆ.

ರಿಷಭ್ ಪಂತ್ ಮತ್ತು ಮೊಹಮ್ಮದ್ ಶಮಿ ಇಬ್ಬರು ಈ ಸಂತಸದ ಕ್ಷಣವನ್ನು ತಮ್ಮ ರೂಮಿನಲ್ಲಿ ಗೆಳೆಯರೊಟ್ಟಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಇನ್ನು ಈ ಸೌತ್ ಆಫ್ರಿಕಾ ವಿರುದ್ದ ಟೆಸ್ಟ್ ಸರಣಿ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆ.ಎಲ್.ರಾಹುಲ್, ಮಯಾಂಗ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ನಾಯಕ ವಿರಾಟ್ ಕೊಹ್ಲಿ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಹೀಗೆ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಗಳು ಇದ್ದಾರೆ.ಪ್ರಮುಖವಾಗಿ ಇದೀಗ ಭಾರತ ತಂಡದ ಪರವಾಗಿ ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತು ಮೊಹಮ್ಮದ್ ಶಮಿ ಹೊಸದೊಂದು ದಾಖಲೆಯನ್ನೇ ಮಾಡಿರುವುದು ನಿಜಕ್ಕೂ ಕೂಡ ಹೆಮ್ಮೆಯೇ ಸರಿ ಎನ್ನಬಹುದಾಗಿದೆ.

%d bloggers like this: