ಯಶ್ ಹುಟ್ಟು ಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದ ಅಭಿಮಾನಿಗಳು

ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ 36 ನೇ ಹುಟ್ಟು ಹಬ್ಬವನ್ನು ತಮ್ಮ ಕುಟುಂಬದ ಜೊತೆಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ.ಕರುನಾಡಿನಲ್ಲಿ ರಾಜಾಹುಲಿ ಎಂದು ಹೆಸರು ಮಾಡಿ, ರಾಷ್ಟ್ರ ಮಟ್ಟದಲ್ಲಿ ರಾಕಿಬಾಯ್ ಎಂದೇ ಕರೆಸಿಕೊಳ್ಳುವ ನಟ ಯಶ್ ಅವರಿಗೆ ದೇಶಾದ್ಯಂತ ಹುಟ್ಟುಹಬ್ಬದ ಶುಭಾಶಯಗಳ ಸುರಿಮಳೆ ಹರಿದು ಬಂದಿದೆ. ಜನವರಿ 8 ರಂದು ಪ್ರತಿ ವರ್ಷ ಯಶ್ ಅವರ ಜನ್ಮದಿನದ ಪ್ರಯುಕ್ತ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಅಪಾರ ಅಭಿಮಾನಿಗಳು ಯಶ್ ಅವರ ಮನೆ ಬಳಿ ಜಮಾಯಿಸಿ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡು ಸಂತೋಷ ಸಂಭ್ರಮ ಪಡುತ್ತಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕನ್ನಡದ ಯಾವ ಸ್ಟಾರ್ ನಟರು ಕೂಡ ಅದ್ದೂರಿಯಾಗಿ ತಮ್ಮ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ.

ಅಂತೆಯೇ ಈ ಬಾರಿಯೂ ಕೋವಿಡ್ ಮೂರನೇ ಅಲೆ ಹೆಚ್ಚಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಡಿ ಏರಿಕೆ ಕಂಡ ಕಾರಣ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಪ್ಯೂ ಜಾರಿ ‌ಮಾಡಿದೆ. ಅದೇ ರೀತಿಯಾಗಿ ಜನವರಿ 8 ಶನಿವಾರದಂದು ವೀಕೆಂಟ್ ಕರ್ಫ್ಯೂ ಇದ್ದ ಕಾರಣ ಯಶ್ ಅವರು ಕೂಡ ತಮ್ಮ ಜನ್ಮದಿನಾಚರಣೆಯನ್ನ ಪತ್ನಿ ರಾಧಿಕಾ ಪಂಡಿತ್ ಮತ್ತು ತಮ್ಮ ಮುದ್ದಾದ ಇಬ್ಬರು ಮಕ್ಕಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿ ಸರಳವಾಗಿಯೇ ಆಚರಿಸಿಕೊಂಡಿದ್ದಾರೆ. ಆದರೆ ಸೋಶಿಯಲ್ ಮೀಡಿಯಾಗಳಲ್ಲಿ ಮಾತ್ರ ಯಶ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ ಹರಿದು ಬಂದಿದೆ.

ಕೆಜಿಎಫ್ ಚಿತ್ರದ ಮೂಲಕ ನ್ಯಾಶನಲ್ ಸ್ಟಾರ್ ಆಗಿರುವ ಯಶ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಅಪಾರ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಅದರಲ್ಲಿಯೂ ಆಂಧ್ರ ಪ್ರದೇಶ, ತಮಿಳು ನಾಡು, ಕೇರಳ ರಾಜ್ಯಗಳಿಂದ ಯಶ್ ಅವರ ಅಭಿಮಾನಿಗಳು ಕೆಜಿಎಫ್ ಚಾಪ್ಟರ್ 2 ಚಿತ್ರದ ಪೋಸ್ಟರ್ ಅನ್ನು ವಿಶೇಷವಾಗಿ ವಿನ್ಯಾಸಗೊಳಿಸಿ ಯಶ್ ಅವರಿಗೆ ಬರ್ಥ್ ಡೇ ವಿಶ್ ಮಾಡಿದ್ದಾರೆ. ಕೆಜಿಎಫ್ ಚಾಪ್ಟರ್ 2. ಚಿತ್ರದಲ್ಲಿ ನಟ ಯಶ್ ಅವರು ಕಾಣಿಸಿಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲಿ ಯಶ್ ಕಾಣಿಸಿಕೊಂಡಿರುವ ಪೋಸ್ಟರ್ ಮಾತ್ರ ಅವರ ಹುಟ್ಟು ಹಬ್ಬದಂದು ಟ್ವಿಟ್ಟರ್ ನಲ್ಲಿ ಭಾರಿ ಟ್ರೆಂಡ್ ಮಾಡಿದೆ. ಇನ್ನು ಇಡೀ ವಿಶ್ವ ಚಿತ್ರರಂಗವೇ ಕಾತುರದಿಂದ ಕಾಯುತ್ತಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾ ಏಪ್ರಿಲ್ 14 ರಂದು ವಿಶ್ವದೆಲ್ಲೆಡೆ ಬೆಳ್ಳಿ ಪರದೆಯಲ್ಲಿ ರಾರಾಜಿಸಲಿದೆ. ಕನ್ನಡದ ಕೀರ್ತಿ ಪತಾಕೆಯನ್ನ ಜಗತ್ತಿನಾದ್ಯಂತ ಪಸರಿಸುವಂತೆ ಮಾಡಿದ ಈ ಕೆಜಿಎಫ್ ಚಿತ್ರದ ಮುಂದುವರಿದ ಭಾಗವಾಗಿ ಕೆಜಿಎಫ್ 2 ಚಿತ್ರ ಕೂಡ ಮೊದಲ ಭಾಗಕ್ಕಿಂತ ನೂರು ಪಟ್ಟು ಅದ್ದೂರಿಯಾಗಿ ಇರಲಿದೆ ಎಂದು ನಟ ಯಶ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

%d bloggers like this: